ಸೌಂದತ್ತಿ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಮೇಲಿದೆ: ದಂಡಿನ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಮೇಲಿದೆ: ದಂಡಿನ

ಸವದತ್ತಿ: ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಸಸ್ಯ ಸಂರಕ್ಷಣೆಯೊಂದಿಗೆ ಅರಣ್ಯ ಸಂಪತ್ತನ್ನು ಉಳಿಸುವ ಕಾರ್ಯ ಪ್ರತಿಯೊಬ್ಬರ ಮೇಲಿದೆ ಎಂದು ಬಿಇಓ ಮೋಹನ ದಂಡಿನ ಹೇಳಿದರು. 

ಸ್ಥಳೀಯ ಶಾಂತಿನಗರದ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದಲ್ಲಿ ಅರಣ್ಯ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ಸರಕಾರದ ಮಹತ್ವಾಂಕಾಂಕ್ಷಿ ಯೋಜನೆಯಾದ ಸಸ್ಯ ಶ್ಯಾಮಲಾ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. 

ಸಶ್ಯ ಶಾಮಲಾ ಯೋಜನೆಯಲ್ಲಿ 50 ಲಕ್ಷ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಗುರಿ ಹೊಂದಲಾಗಿದ್ದು, ಈ ಯೋಜನೆ ಯಶಸ್ವಿಯಾಗಲು ಪ್ರತಿಯೊಬ್ಬರ ಸಹಕಾರ ಅತ್ಯವಶ್ಯ ಎಂದರು. 

ಅರಣ್ಯಾಧಿಕಾರಿ ಲಿಂಗರಡ್ಡಿ, ಬಿ.ಎನ್‌.ಬ್ಯಾಳಿ, ಅಕ್ಷರದಾಸೋಹ ಅಧಿಕಾರಿ ಮೈತ್ರಾದೇವಿ ವಸ್ತ್ರದ, ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ ಕುರಿ, ಜಿ.ಎನ್‌.ಕರಾಳೆ, ಸಿಆರ್‌ಪಿ ರವಿಕುಮಾಋ ನಲವಡೆ, ಎಫ್‌.ಜಿ.ನವಲಗುಂದ, ರಾಮಚಂದ್ರ​‍್ಪ, ಟಿ.ಬಿ.ಏಗನೌಡರ ಶಾಲಾ ಎಸ್‌.ಡಿ.ಎಮ್‌.ಸಿ ಅಧ್ಯಕ್ಷರು ಸದಸ್ಯರು ಮತ್ತು ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

  

  



ಸುದ್ದಿ ಓದಿ