ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ
Environmental protection is everyone's duty
ಲೋಕದರ್ಶನ ವರದಿ
ಹಾನಗಲ್ಲ 08: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ತಾಲೂಕ ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಮಹೇಶ ಎಸ್ ಪಾಟೀಲ ಅವರು ಹೇಳಿದರು.
ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಲಯ ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ ವಿಶ್ವ ಪರಿಸರ ದಿನಾಚಾರಣೆಯನ್ನು ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗಿಡಗಳು ಉತ್ತಮ ವಾತಾವರಣ ನಿರ್ಮಾಣಕ್ಕೆ ಪ್ರಮುಖ ಹಾಗೂ ಬಹುಮುಖ್ಯ ಪಾತ್ರವಹಿಸುತ್ತೇವೆ.ಪರಿಸರ ಬೆಳೆಸಲು ನಾವೆಲ್ಲರೂ ಬದ್ಧರಾಗಬೇಕಾಗಿದೆ.ಹೆಚ್ಚು ಗಿಡಗಳನ್ನು ನೆಡುವ ಮೂಲಕ ಉತ್ತಮ ಪರಿಸರ ನಿರ್ಮಾಣವಾಗುವಂತೆ ಮಾಡಲು ಸಾಧ್ಯ ಎಂದರು.
ಗೌರವಾನ್ವಿತ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅಮೊಲ ಜೆ ಹಿರಿಕುಡೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಮನೆಗೊಂದು ಮರ,ಊರಿಗೊಂದು ವನ ಎಂಬಂತೆ ಉತ್ತಮ ಆರೋಗ್ಯಕ್ಕೆ ಸಮತೋಲನ ಪರಿಸರ ಬೇಕಾಗುತ್ತದೆ ಎಂದರು. ಗೌರವಾನ್ವಿತ ಕಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಐಶ್ವರ್ಯ ಸಿ ಪಟ್ಟಣಶೆಟ್ಟಿ ಅವರು ಮಾತನಾಡಿ ಆಧುನಿಕ ಯುಗದಲ್ಲಿ ಪರಿಸರದ ಮಹತ್ವ ಹೆಚ್ಚಾಗಿದೆ. ಆರೋಗ್ಯಯುತ ಬದುಕಿಗೆ ಪರಿಸರವನ್ನು ಬೆಳಸಬೇಕಾಗಿದೆ.ಅರಣ್ಯ ಇಲಾಖೆಯ ಜೊತೆಗೆ ಸಾರ್ವಜನಿಕರು ಸಹಕಾರ ನೀಡಿದಾಗ ಸಮತೋಲನ ಪರಿಸರಕ್ಕೆ ಸಹಕಾರಿಯಾಗುತ್ತದೆ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಎಮ್.ಸಿ.ಮಹಾಂತಿನಮಠ ಮಾತನಾಡಿ ಪರಿಸರ ದಿನಾಚರಣೆ ವರ್ಷಕ್ಕೊಮ್ಮೆ ಆಚರಿಸುವುದಷ್ಟೇ ಅಲ್ಲ ಅದು ಪ್ರತಿಯೊಬ್ಬರ ನಿತ್ಯ ಜೀವನದಲ್ಲಿ ಅಳವಡಿಕೆಯಾಗಬೇಕು ಎಂದರು.ಈ ಸಂದರ್ಭದಲ್ಲಿ ನ್ಯಾಯಾದೀಶರು,ನ್ಯಾಯಾಲಯದ ಸಿಬ್ಬಂದಿಗಳು,ನ್ಯಾಯವಾದಿಗಳು ಹಾಗೂ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 