ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್ Environmental protection is everyone's responsibility: Journalist Feroze Rojindar

      ವಿಜಯಪುರ  05: ಪ್ರತಿಯೊಬ್ಬರೂ ಪರಿಸರ ರಕ್ಷಣೆಗೆ ಮುಂದಾಗಬೇಕು. ಪರಿಸರವನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ ಎಂದು  ಪತ್ರಕರ್ತ ಫಿರೋಜ್ ರೋಜಿಂದಾರ್ ಅವರು ಹೇಳಿದರು. 

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಸ್ಟೇಶನ್ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ  ಮಾತನಾಡಿದರು. ಇಂದಿನಿಂದಲೇ ನಾವು ಪರಿಸರವನ್ನು ಕಾಪಾಡಿಕೊಂಡು ಹೋದಲ್ಲಿ, ಮುಂದಿನ ಭವಿಷ್ಯದ ಪೀಳಿಗೆಗೆ ಸ್ವಚ್ಛ ಹಾಗೂ ಸುಂದರವಾದ ಪರಿಸರವನ್ನು ಕೊಡುಗೆಯಾಗಿ ನೀಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. 

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ವಾರ್ತಾಧಿಕಾರಿ ಅಮರೇಶ ದೊಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಯೂಬ್ ದ್ರಾಕ್ಷಿ, ಪ್ರಮುಖರಾದ ರಾಕೇಶ, ಕಿರಣ್ ಹಾಗೂ ವಾರ್ತಾ ಇಲಾಖೆಯ ಸಿಬ್ಬಂದಿಗಳಾದ ಮಿಥುನ್ ಬನಸೋಡೆ, ವೈಷ್ಣವಿ ಭಗವತಿ, ರತ್ನಾಂಜಲಿ ವಾಲಿಕಾರ, ಲಕ್ಷ್ಮಣ ಘಟಕಾಂಬಳೆ ಮತ್ತು ನಾಗರಾಜ್ ಉಪಸ್ಥಿತರಿದ್ದರು