ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ : ಶ್ರೀ ನವೀನ ಎನ್
Environmental protection is the duty of every citizen: Shri Naveen N
ಲೋಕದರ್ಶನ ವರದಿ
ಬೆಳಗಾವಿ 05: ಸರಳ ಸುಂದರ ಜೀವನಕ್ಕೆ ಪರಿಸರ ರಕ್ಷಣೆಯೊಂದೇ ದಾರಿ ಎಂದು ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ನವೀನ ಎನ್ ಅವರು ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಪರಿಸರವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ಹವಾಮಾನ ಬದಲಾವಣೆ, ಮಾಲಿನ್ಯ, ಅರಣ್ಯ ನಾಶ ಮೊದಲಾದ ಸಮಸ್ಯೆಗಳು ಜಗತ್ತಿನಾದ್ಯಂತ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತಿವೆ.
ಇವುಗಳನ್ನು ತಡೆಗಟ್ಟಲು ಮರಗಳನ್ನು ನೆಡುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ಅಗತ್ಯವಿರುವ ಮಾತ್ರ ಸಂಪನ್ಮೂಲಗಳನ್ನು ಬಳಸಿ ಹಾಗೂ ವಿದ್ಯುತ್, ನೀರು ಮತ್ತು ಕಾಗದದ ಅನಗತ್ಯ ಬಳಕೆಯನ್ನು ಕಡಿಮೆ ಮಾಡಿ ಜಲ ಸಂಪನ್ಮೂಲಗಳನ್ನು ಸಂರಕ್ಷಿಸುವುದು ಹಾಗೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಅಗತ್ಯವೆಂದು ಹೇಳಿದರು. ಎಲ್ಲಾ ಸಂಘ ಸಂಸ್ಥೆಗಳಲ್ಲಿ ಕಡಿಮೆ ಪೇಪರಗಳನ್ನು ಬಳಕೆ ಮಾಡಿ ಗಿಡ ಮರಗಳನ್ನು ಕಡಿಯುದನ್ನು ಕಡಿಮೆ ಮಾಡೋಣ ಎಂದು ತಿಳಿಹೇಳಿದರು.
ಇದೇ ಸಂದರ್ಬದಲ್ಲಿ ಉಪಸ್ಥಿತರಿದ್ದ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸಂಜಯ ಕಂಬಾರ ಅವರು ಮಾತನಾಡುತ್ತ ಮನೆಗೊಂದು ಗಿಡ ನೆಡುವ ಮುಖಾಂತರ ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಈ ಮೂಲಕ ನಾವೆಲ್ಲರೂ ಸ್ವಚ್ಛ ಗಾಳಿಯನ್ನು ಸೇವಿಸಲು ಹಾಗೂ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸರಳ ಆಯಾಮವನ್ನು ಕಂಡುಕೊಂಡಂತಾಗುತ್ತದೆ. ಗಿಡನೆಡುವದರ ಮೂಲಕ ಮಣ್ಣಿನ ಸವಕಳಿ, ಮಳೆ ನೀರು ನೆಲದಲ್ಲಿ ಇಂಗುವದು, ಶುದ್ದ ಆಮ್ಲಜನಕದ ಉತ್ಪತ್ತಿ ಹೀಗೆ ನಾನಾ ಲಾಭಗಳನ್ನು ಪಡೆಯಬಹುದಾಗಿದೆ. ಆದರಲ್ಲೂ ಜಾಗತಿಕ ತಾಪಮಾನ ಹೆಚ್ಚಾಗದಂತೆ ತಡೆಯಲು ನಮ್ಮ ಕೊಡುಗೆಯನ್ನು ನೀಡದಂತಾಗುತ್ತದೆ ಎಂದು ತಿಳುವಳಿಕೆ ನೀಡಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 