ಕ್ರೀಡೆಗೂ ಶಿಕ್ಷಣದಷ್ಟೇ ಆದ್ಯತೆ: ಕಾಶಪ್ಪನವರ

ಕ್ರೀಡೆಗೂ ಶಿಕ್ಷಣದಷ್ಟೇ ಆದ್ಯತೆ: ಕಾಶಪ್ಪನವರ  Equal priority for sports and education: Kashappanavar


ಬಾಗಲಕೋಟೆ 16: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗಾವಿ ವಿಭಾಗ ಮಟ್ಟದ ಹ್ಯಾಂಡಬಾಲ್ ಹಾಗೂ ಬಾಗಲಕೋಟೆ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಬುಧವಾರ ಚಾಲನೆ ನೀಡಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ, ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿ ಮಾತನಾಡಿದ ಅವರು, ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು. ಕ್ರೀಡೆಯಿಂದ ಮಕ್ಕಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವ ಬೆಳೆಯುತ್ತದೆ ಎಂದರು.  

ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಅಗತ್ಯ ಪ್ರೋತ್ಸಾಹ ಹಾಗೂ ಸೌಲಭ್ಯಗಳನ್ನು ಒದಗಿಸುವ ಮೂಲಕ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಉತ್ತೇಜಿಸಬೇಕು.  ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಶಾಸಕ ಉಮೇಶ ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್‌.ಪೂಜಾರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನೀಲಕುಮಾರ ದಡ್ಡಿ, ಬುಡಾ ಅಧ್ಯಕ್ಷ ಅಬ್ದುಲರಜಾಕ ಬೇನೂರ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್‌.ಎಸ್‌.ಸೀತಾರಾಮು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಲ್‌.ಕೆ.ತೋರಣಗಟ್ಟಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.