ಪ್ರಬಂಧ ಸ್ಪರ್ಧೆ: ಜಿಲ್ಲಾ ಮಟ್ಟಕ್ಕೆ ಶಿಕ್ಷಕ ಸಂತೋಷ ಬಂಡೆ ಆಯ್ಕೆ
ಲೋಕದರ್ಶನ ವರದಿ
ಇಂಡಿ 26: ನಗರದ ಗುರುಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯತ್ ವಿಜಯಪುರ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಬೆಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ತಾಲೂಕ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಯಲ್ಲಿ ಪ್ರಾಥಮಿಕ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ ಶಿಕ್ಷಕ ಸಂತೋಷಕುಮಾರ ಎಸ್ ಬಂಡೆ ಅವರು ತಾಲೂಕಿಗೆ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಅವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ ಎಂದು ತಾಲೂಕ ನೋಡಲ್ ಅಧಿಕಾರಿ ಆನಂದ ಹುಣಸಗಿ ತಿಳಿಸಿದ್ದಾರೆ. ಶಿಕ್ಷಣ ಸಂಯೋಜಕ ಆರ್.ಪಿ ಮಿಸಾಳೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ರವಿ ಗಿಣ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.