ಮುದ್ದೆಬಿಹಾಲ್

ವನ್ಯಜೀವಿ ಸಪ್ತಾಹದ ಅಂಗವಾಗಿ ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ

ವನ್ಯಜೀವಿ ಸಪ್ತಾಹದ ಅಂಗವಾಗಿ ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ


ಮುದ್ದೇಬಿಹಾಳ 07: ಬಿಎಎಸ್ ಇಂಟರನ್ಯಾಷನಲ್ ಶಾಲೆ ಹಾಗೂ ಮುದ್ದೇಬಿಹಾಳ ತಾಲೂಕು ಪ್ರಾದೇಶಿಕ  ಅರಣ್ಯ ವಲಯದ ಸಹಯೋಗದಲ್ಲಿ 72ನೇ ವನ್ಯಜೀವಿ  ಅಂಗವಾಗಿ ಬಿಎಎಸ್ ಶಾಲೆಯ ವಿದ್ಯಾರ್ಥಿಗಳಿಗೆ, ಚಿತ್ರಕಲಾ ಸ್ಪರ್ಧೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವನಗೌಡ ಬಿರಾದಾರ ಮಾತನಾಡಿ ವನ್ಯಜೀವಿಗಳೊಂದಿಗೆ ಸಹಬಾಳ್ವೆ ಎಂಬ ಆಶಯದೊಂದಿಗೆ ವನ್ಯಜೀವಿ ಸಂರಕ್ಷಣೆ ಹಾಗೂ ಪರಿಸರದ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇಲಾಖೆಯವರು ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಿರುವದು ಅತ್ಯಂತ ಅರ್ಥಪೂರ್ಣವಾಗಿದೆ, ಭೂಮಂಡಲದಲ್ಲಿ ಪರಿಸರ ಸಮತೋಲನ ಕಾಪಾಡಲು ಮತ್ತು ಅರಣ್ಯ ಸಂಪತ್ತು ವೃದ್ಧಿಗೆ, ಅದರ ಉಳಿವಿಗಾಗಿ ವಿಶೇಷ ಕಾಳಜಿ ವಹಿಸುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದು ಬಣ್ಣಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೆಲ್ವಕುಮಾರ ಮಾತನಾಡಿವನ್ಯಜೀವಿ ಸಪ್ತಾಹ ಅಂಗವಾಗಿ ಏರಿ​‍್ಡಸಲಾದ, ಚಿತ್ರಕಲಾ ಸ್ಪರ್ಧೆಯಲ್ಲಿ ಬಿಎಎಸ್ ಶಾಲೆಯ 7 ಮತ್ತು 8 ನೆಯ ವರ್ಗದ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ವನ್ಯಜೀವಿ ಸಂರಕ್ಷಣೆ, ಅರಣ್ಯ ರಕ್ಷಣೆ, ಪರಿಸರ ಸಮತೋಲನ ಹಾಗೂ ಸಹಬಾಳ್ವೆಯ ಕುರಿತು ತಮ್ಮ ವಿಚಾರಗಳನ್ನು ಪ್ರಬಂಧ ಮತ್ತು ಚಿತ್ರಗಳ ಮೂಲಕ ಪ್ರತಿಭೆ ಪ್ರದರ್ಶಿಸಿದ್ದಾರೆ ಎಂದು ಹೇಳಿದ ಅವರು ವನ್ಯಜೀವಿಗಳ ಸಂರಕ್ಷಣೆಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ, 


ಸುದ್ದಿ ಓದಿ