10 ಸಾವಿರ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ
Establishment of 10,000 Bharat Jodo Youth Associations
ಲೋಕದರ್ಶನ ವರದಿ
ಹಾವೇರಿ 19: ಯುವಜನರಲ್ಲಿ ಕ್ರೀಡೆ, ಸಾಂಸ್ಕೃತಿಕ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯ ಬೆಳೆಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6,000 ಹಾಗೂ ನಗರ ಪ್ರದೇಶಗಳಲ್ಲಿ 4,000 ಸೇರಿದಂತೆ ಒಟ್ಟು 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಗ್ರಾಮ ಪಂಚಾಯಿತಿ ಹಾಗೂ ನಗರ ವ್ಯಾಪ್ತಿಯಲ್ಲಿ ಸಾಮಾಜಿಕವಾಗಿ ಸಕ್ರಿಯವಾಗಿರುವ ಯುವಕರನ್ನು ಒಳಗೊಂಡಂತೆ ಪ್ರತಿ ಸಂಘದಲ್ಲಿ ಕನಿಷ್ಠ 100 ಯುವಕ-ಯುವತಿಯರನ್ನು ಸದಸ್ಯರನ್ನಾಗಿ ಮಾಡಬೇಕು. 18ರಿಂದ 35 ವರ್ಷದೊಳಗಿನ, ಸಂಬಂಧಿತ ವಾರ್ಡ್‌ನ ನಿವಾಸಿಗಳಾದ ಯುವಕರು ಆಧಾರ್ ಕಾರ್ಡ್ ಸಹಿತ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಗೆ ರೂ.10 ಶುಲ್ಕ ನಿಗದಿಪಡಿಸಲಾಗಿದ್ದು, ಪ್ರತಿ ಸಂಘಕ್ಕೆ ಒಬ್ಬ ತರಬೇತುದಾರರನ್ನು ನೇಮಕ ಮಾಡಲಾಗುತ್ತದೆ.
ಕರ್ನಾಟಕ ಸೊಸೈಟೀಸ್ ನೋಂದಣಿ ಕಾಯ್ದೆ-1960ರಡಿ ಸಂಘಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ಯುವಕ-ಯುವತಿಯರು ಛರಿಥಿ.ಞಚಿಡಿಟಿಚಿಣಚಿಞಚಿ.ರಠ.ಟಿ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
ಸಂಘಗಳ ಮೂಲಕ ಕ್ರೀಡೆ, ಫಿಟ್‌ನೆಸ್, ಸಮುದಾಯ ಅಭಿವೃದ್ಧಿ, ಅರಣ್ಯ ಹಾಗೂ ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಯೋಗಕ್ಷೇಮ, ಸಂಸ್ಕೃತಿ, ಸಾಮಾಜಿಕ ಸಾಮರಸ್ಯ, ಕೌಶಲ್ಯಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ವಾರ್ಡ, ತಾಲೂಕು ಪಂಚಾಯಿತಿ ಹಾಗೂ ನಗರಸಭೆ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 