ಪ್ರತಿಯೊಬ್ಬ ಅರ್ಹ ಯುವ-ಯುವತಿಯರ ಮತದಾರರಾಗಿ ನೋಂದಾಯಿಸಿಕೊಳ್ಳಲಿ: ಜಿಲ್ಲಾಧಿಕಾರಿ

ಪ್ರತಿಯೊಬ್ಬ ಅರ್ಹ ಯುವ-ಯುವತಿಯರ ಮತದಾರರಾಗಿ ನೋಂದಾಯಿಸಿಕೊಳ್ಳಲಿ: ಜಿಲ್ಲಾಧಿಕಾರಿ Every eligible young man and woman should register as a voter: Deputy Commissioner

ಲೋಕದರ್ಶನ ವರದಿ  

ಪ್ರತಿಯೊಬ್ಬ ಅರ್ಹ ಯುವ-ಯುವತಿಯರ ಮತದಾರರಾಗಿ ನೋಂದಾಯಿಸಿಕೊಳ್ಳಲಿ: ಜಿಲ್ಲಾಧಿಕಾರಿ  

ಬಳ್ಳಾರಿ, ಸೆ.11: ಯುವ ಮತದಾರರು ಪ್ರಜಾಪ್ರಭುತ್ವದ ಪ್ರಮುಖ ಶಕ್ತಿಯಾಗಿದ್ದು, ಪ್ರತಿಯೊಬ್ಬ ಅರ್ಹ ಯುವ-ಯುವತಿಯರ ಮತದಾರರಾಗಿ ನೋಂದಾಯಿಸಿಕೊಂಡು ತಮ್ಮ ಮತದಾನದ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಕರೆ ನೀಡಿದರು.  

ನಗರದ ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್ ಸಂಸ್ಥೆಯ ಚುನಾವಣಾ ಸಾಕ್ಷರತಾ ಕ್ಲಬ್, ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮತದಾರರ ಗುರುತಿನ ಚೀಟಿ ನೋಂದಣಿ ಅಭಿಯಾನಹಿ2026ಚಾಲನೆ ನೀಡಿ ಅವರು ಮಾತನಾಡಿದರು.  

ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಯುವಜನತೆ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕು. ಮತದಾನ ಕೇವಲ ಹಕ್ಕಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ಯಾವುದೇ ರೀತಿಯ ಪ್ರಲೋಭನೆ, ಧರ್ಮ, ಜಾತಿ, ಭಾಷೆ ಅಥವಾ ಸಮುದಾಯದ ಪ್ರಭಾವಕ್ಕೆ ಒಳಗಾಗದೆ ವಿವೇಚನೆಯಿಂದ ಮತ ಚಲಾಯಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.  

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ಹಾರಿಸ್ ಸುಮೇರ್ ಮಾತನಾಡಿ, ಯುವಜನರಲ್ಲಿ ಚುನಾವಣಾ ಸಾಕ್ಷರತೆ ಮೂಡಿಸುವುದು ಹಾಗೂ ಅರ್ಹ ವಿದ್ಯಾರ್ಥಿಗಳನ್ನು ಮತದಾರರಾಗಿ ನೋಂದಾಯಿಸುವುದು ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ತಮ್ಮ ಕುಟುಂಬ ಹಾಗೂ ಸಮಾಜದಲ್ಲಿಯೂ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.  

ಅರ್ಹ ವಯಸ್ಸನ್ನು ತಲುಪಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತದಾರರಾಗಿ ನೋಂದಾಯಿಸಿಕೊಳ್ಳಬೇಕು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ತಮ್ಮ ಹಕ್ಕು ಮತ್ತು ಜವಾಬ್ದಾರಿಯನ್ನು ಅರಿತುಕೊಂಡು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.