ಶಿರಹಟ್ಟಿ

ಪ್ರತಿಯೊಬ್ಬ ಪಾಲಕರು ಮಕ್ಕಳ ಕಲಿಕೆಯ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು: ಬಿಇಓ ನಾಯಕ್

ಪ್ರತಿಯೊಬ್ಬ ಪಾಲಕರು ಮಕ್ಕಳ ಕಲಿಕೆಯ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು: ಬಿಇಓ ನಾಯಕ್

ಶಿರಹಟ್ಟಿ,26:  ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಕ್ಕಾಗ ಮಾತ್ರ ಮಕ್ಕಳ ಉತ್ತಮ ಭವಿಷ್ಯ ರಪಿಸಲು ಸಾಧ್ಯ, ಅದಕ್ಕೆ ಪೂರಕವಾಗಿ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳ ಕಲಿಕೆಯ ಗುಣಮಟ್ಟ ಹೆಚ್ಚಿಸಲು ಶ್ರಮಿಸಲು ಶ್ರಮಿಸುವುದು ಅಷ್ಟೇ ಮುಖ್ಯವಾಗಿದೆ ಎಂದು ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ಉಭಯ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎನ್ ನಾಯಕ್ ಹೇಳಿದರು.  

ಅವರು ತಾಲೂಕಾ ಶಿಕ್ಷಣ ಇಲಾಖೆ, ಮಕ್ಕಳ ಜಾಗೃತಿ ಸಂಸ್ಥೆ ಇವರುಗಳ ಸಹಯೋಗದೊಂದಿಗೆ ನಡೆಸಲಾದ ತಾಲೂಕಿನ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ನೀಡಲಾದ ಉಚಿತ ಪಠ್ಯೇತರ ಪರಿಕರಗಳ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಆರು ವರ್ಷಗಳಿಂದ ಶಿರಹಟ್ಟಿ ತಾಲೂಕಿನ ಆಯ್ದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ಬನ್ನಿಕೊಪ್ಪ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಾರಿಕೊಪ್ಪ, ಶ್ರೀಮತಿ ಫ.ಫ ಹಿರೇಮಠ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ ಬನ್ನಿಕೊಪ್ಪ, ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ಯಳವತ್ತಿ ಈ ಶಾಲೆಗಳಲ್ಲಿ ಸುಮಾರು 370 ಕ್ಕೂ ಹೆಚ್ಚು ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್, ಕುಡಿಯುವ ನೀರಿನ ಬಾಟಲ್, ಸ್ಕೆಚ್ ಪೆನ್, ನೋಟ್ ಬುಕ್‌ಗಳನ್ನು ವಿತರಣೆ ಮಾಡುತ್ತಿರುವುದು ನಿಜಕ್ಕೂ ಶ್ಲ್ಯಾಘನೀಯ ಎಂದರು. 

ಈ ಸಂದರ್ಭದಲ್ಲಿ ಸಿ ಆರ್ ಪಿ. ಚಂದ್ರಶೇಖರ ಒಡಕಣ್ಣವರ, ಮಕ್ಕಳ ಜಾಗೃತಿ ಸಂಸ್ಥೆಯ ಹಿರಿಯ ಸಂಯೋಜಕ ಆನಂದ ಮಣ್ಣೂರ, ಎಸ್ ಡಿ ಎಂ ಸಿ ಸದಸ್ಯರು ಅಧ್ಯಕ್ಷರು ಹಾಗೂ ಮಕ್ಕಳ ಜಾಗೃತಿ ಸಂಸ್ಥೆಯ ಶಿಕ್ಷಕರು ಹಾಗೂ ಶಾಲೆಯ ಸರ್ವ ಶಿಕ್ಷಕರು ಉಪಸ್ಥಿತರಿದ್ದರು. 


ಸುದ್ದಿ ಓದಿ