ವಿಜಯಪುರ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಭಾಗಿತ್ವ ಅಗತ್ಯ: ಜಿಲ್ಲಾಧಿಕಾರಿ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಭಾಗಿತ್ವ ಅಗತ್ಯ: ಜಿಲ್ಲಾಧಿಕಾರಿ

ಲೋಕದರ್ಶನ ವರದಿ 

 ವಿಜಯಪುರ 23: ಅಂತರರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಒಂದು ವಾರಗಳ ಕಾಲ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಜಾಥಾ, ವಿಚಾರ ಸಂಕಿರಣ ಹಾಗೂ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಹೇಳಿದರು. 

ನಗರದ ಡಾ. ಬಿ.ಆರ್‌. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಂಗಳವಾರ ಮಾದಕ ದ್ರವ್ಯಗಳ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರುದ್ದ ಅಂತರರಾಷ್ಟ್ರೀಯ ದಿನ ಆಚರಣೆಯ ದಿನ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾದಕ ದ್ರವ್ಯಗಳ ವ್ಯಸನವು ಇಂದು ಸಮಾಜ ಎದುರಿಸುತ್ತಿರುವ ಗಂಭೀರ ಸಮಸ್ಯೆಯಾಗಿದ್ದು, ಯುವಜನತೆ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುವಂತಹ ದುಶ್ಚಟಗಳಿಂದ ದೂರವಿರಬೇಕು ಎಂದು ಕರೆ ನೀಡಿದರು. ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಮೇಲೆಯೂ ದುಷ್ಪರಿಣಾಮ ಬೀರುತ್ತದೆ. ಇದರಿಂದ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ ಎಂದು ಹೇಳಿದರು. 


ಸುದ್ದಿ ಓದಿ