ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಭಾಗಿತ್ವ ಅಗತ್ಯ: ಜಿಲ್ಲಾಧಿಕಾರಿ
Everyone's participation is necessary to build an addiction-free society: District Collector
ಲೋಕದರ್ಶನ ವರದಿ
ವಿಜಯಪುರ 23: ಅಂತರರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಒಂದು ವಾರಗಳ ಕಾಲ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಜಾಥಾ, ವಿಚಾರ ಸಂಕಿರಣ ಹಾಗೂ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಂಗಳವಾರ ಮಾದಕ ದ್ರವ್ಯಗಳ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರುದ್ದ ಅಂತರರಾಷ್ಟ್ರೀಯ ದಿನ ಆಚರಣೆಯ ದಿನ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾದಕ ದ್ರವ್ಯಗಳ ವ್ಯಸನವು ಇಂದು ಸಮಾಜ ಎದುರಿಸುತ್ತಿರುವ ಗಂಭೀರ ಸಮಸ್ಯೆಯಾಗಿದ್ದು, ಯುವಜನತೆ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುವಂತಹ ದುಶ್ಚಟಗಳಿಂದ ದೂರವಿರಬೇಕು ಎಂದು ಕರೆ ನೀಡಿದರು. ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಮೇಲೆಯೂ ದುಷ್ಪರಿಣಾಮ ಬೀರುತ್ತದೆ. ಇದರಿಂದ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ ಎಂದು ಹೇಳಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 