ದೇಶದ ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ಸಲ್ಲಿಸಿ: ಶಿಕ್ಷಕ ಕಬ್ಬೂರ
ಸವದತ್ತಿ: “ಭಾರತದ ಸಂವಿಧಾನ ಇಡೀ ವಿಶ್ವದಲ್ಲೇ ಅತ್ಯಂತ ದೊಡ್ಡ ಸಂವಿಧಾನವಾಗಿದ್ದು, ಇದರಲ್ಲಿ ನಮ್ಮ ಹಕ್ಕುಗಳನ್ನು ತಿಳಿಸುಸುವುದರ ಜೊತೆಗೆ ದೇಶಕ್ಕಾಗಿ ನಾವೇನು ಮಾಡಬೇಕು ಎಂಬ ಕರ್ತವ್ಯಗಳನ್ನು ಸೂಚಿಸಲಾಗಿದೆ, ಆದ್ದರಿಂದ ಪ್ರತಿಯೊಬ್ಬ ಭಾರತೀಯನೂ ಸಂವಿಧಾನಕ್ಕೆ ಗೌರವ ಸಲ್ಲಿಸಬೇಕಾಗಿರುವುದು ಆದ್ಯ ಕರ್ತವ್ಯವಾಗಿದೆ’ ಎಂದು ಶಿಕ್ಷಕ ಎನ್.ಎನ್.ಕಬ್ಬೂರ ಅಭಿಪ್ರಾಯ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಸ್ಥಳೀಯ ಸರಕಾರಿ ಪ್ರಾಥಮಿಕ ಕನ್ನಡ ಶಾಲೆ ನಂ-6 ರಲ್ಲಿ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪೀಠಿಕೆಯ ಪ್ರತಿಜ್ಞಾವಧಿಯನ್ನು ಮಕ್ಕಳಿಗೆ ಬೋಧಿಸುವ ಮೂಲಕ ಸಂವಿಧಾನದ ಬಗ್ಗೆ ವಿವರವಾಗಿ ತಿಳಿಸಿ ಹೇಳಿದರು.
ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಪ್ರದರ್ಶನ ಮಾಡಲಾಯಿತು, ನಂತರ ಮಕ್ಕಳು ಚರ್ಚಾಸ್ಪರ್ಧೆ ಮತ್ತು ರಸಪ್ರಶ್ನೆಯಲ್ಲಿ ಭಾಗವಹಿಸಿದರು. ಶಾಲೆಯ ಶಿಕ್ಷಕಿ ಎಮ್.ಆರ್.ಫಂಡಿ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಅಡುಗೆ ಸಿಬ್ಬಂದಿಯವರು ಮತ್ತು ಪಾಲಕರು ಉಪಸ್ಥಿತರಿದ್ದರು.