ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಗೆ ಎಲ್ಲರೂ ಸಂಕಲ್ಪ ಮಾಡಬೇಕು: ನ್ಯಾಯಾಧೀಶ ಸಿದ್ಧಲಿಂಗ ಪ್ರಭು
Everyone must pledge to conserve forests and wildlife: Judge Siddalinga Prabhu
ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಗೆ ಎಲ್ಲರೂ ಸಂಕಲ್ಪ ಮಾಡಬೇಕು: ನ್ಯಾಯಾಧೀಶ ಸಿದ್ಧಲಿಂಗ ಪ್ರಭು
ಬಳ್ಳಾರಿ, ಸೆ.11: ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸುತ್ತೇವೆ, ಅವುಗಳ ನಾಶಕ್ಕೆ ಅವಕಾಶ ನೀಡುವುದಿಲ್ಲ ಎಂಬ ಪ್ರತಿಜ್ಞೆಯನ್ನು ಪ್ರತಿಯೊಬ್ಬರೂ ಸ್ವೀಕರಿಸಬೇಕು. ಆಗ ಮಾತ್ರ ಪ್ರಕೃತಿ ಸಂರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ಅರಣ್ಯ ಹುತಾತ್ಮರ ಬಲಿದಾನಕ್ಕೆ ಸೂಕ್ತ ಸಾರ್ಥಕತೆ ದೊರೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿದ್ಧಲಿಂಗ ಪ್ರಭು ಹೇಳಿದರು.
ನಗರದ ಅರಣ್ಯ ಇಲಾಖೆ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಅರಣ್ಯ ಹುತಾತ್ಮರ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹುತಾತ್ಮ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಿಸಿ ಅವರು ಮಾತನಾಡಿದರು.
ಅರಣ್ಯ ಯೋಧರ ತ್ಯಾಗದಿಂದಾಗಿ ಇಂದಿಗೂ ಪ್ರಕೃತಿಯ ಜೀವಸಂಕುಲಗಳಿಗೆ ಸೂಕ್ತ ಆಶ್ರಯ ದೊರೆತಿದೆ. ಪರಿಸರದ ಸಮತೋಲನ ಕಾಪಾಡಿಕೊಳ್ಳಲು ಕಾಡುಗಳ ಸಂರಕ್ಷಣೆ ಅತ್ಯಗತ್ಯ. ಅರಣ್ಯ ಸಂಪತ್ತಿನ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಗಾಗಿ ಅರಣ್ಯವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಮಾತನಾಡಿ, ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಬೇಟೆಗಾರರು ಹಾಗೂ ಕಾಡುಗಳ್ಳರ ವಿರುದ್ಧ ಹೋರಾಡುವ ಅರಣ್ಯ ಸಿಬ್ಬಂದಿಗೆ ಸಾರ್ವಜನಿಕರು ಮತ್ತು ಪರಿಸರ ಪ್ರಿಯರು ಬೆಂಬಲವಾಗಿ ನಿಲ್ಲಬೇಕು. ಅರಣ್ಯ ರಕ್ಷಣೆಯಲ್ಲಿ ತೊಡಗಿರುವ ಸಿಬ್ಬಂದಿಯ ಸೇವೆಯನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಆಶಯ ವ್ಯಕ್ತಪಡಿಸಿದರು.
ಹುತಾತ್ಮರಿಗೆ ಗೌರವ
ಮೃತರಾದ ಅರಣ್ಯ ಯೋಧರ ಸ್ಮರಣಾರ್ಥ ಪೊಲೀಸ್ ಸಿಬ್ಬಂದಿ ಕುಶಾಲತೋಪು ಹಾರಿಸಿ ಗೌರವ ಸಲ್ಲಿಸಿದರು. ಬಳಿಕ ಎರಡು ನಿಮಿಷಗಳ ಮೌನಾಚರಣೆ ಮೂಲಕ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ಉಪ ಸಂರಕ್ಷಣಾಧಿಕಾರಿ ಮಾರ್ಕಾಂಡೇಯ, ಸಂತೋಷ್ ನಾಯಕ್ ಸೇರಿದಂತೆ ಅರಣ್ಯ ಇಲಾಖೆಯ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 