ಕನಕದಾಸರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಮೈಗೂಡಿಸಿ: ಬಿ.ಎಲ್. ಘಂಟಿ
Everyone should embody the ideals and principles of Kanakadasa: B.L. Ghanti
ಕನಕದಾಸರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಮೈಗೂಡಿಸಿ: ಬಿ.ಎಲ್. ಘಂಟಿ
ರಾಯಬಾಗ 09: ಕನಕದಾಸರು ಹಲವಾರು ಕೀರ್ತನೆಗಳನ್ನು ಬರೆಯುವುದರ ಮೂಲಕ ಹಾಗೂ ಹರಿಭಕ್ತಿಸಾರ, ನಳ ಚರಿತ್ರೆ, ರಾಮಧಾನ್ಯಚರಿತೆ, ಮೋಹನ ತರಂಗಿನಿ ಮುಂತಾದ ಕೃತಿಗಳನ್ನು ರಚಿಸುವ ಮೂಲಕ ದಾಸ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ದಾಸ ಸಾಹಿತ್ಯದ ಹರಿಕಾರರು ಎಂದು ಸಾಂಸ್ಕೃತಿಕ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಜನಪದ ಕಲಾವಿದ ಬಿ.ಎಲ್. ಘಂಟಿ ಹೇಳಿದರು. ಶನಿವಾರ ತಾಲೂಕಿನ ಹಿಡಕಲ ಗ್ರಾಮದಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ತಾಲೂಕಾ ಘಟಕ ರಾಯಬಾಗ ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಭಕ್ತ ಕನಕದಾಸರ 538ನೇ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕನಕದಾಸರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ರಾಯಬಾಗ ತಾಲೂಕು ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ. ಎಸ್. ವಂಟಗೂಡಿ ಅಧ್ಯಕ್ಷತೆಯನ್ನು ವಹಿಸಿದ್ದರು. ಸಚಿನ ಗಡದಿ, ರಾಮು ವಂಟಗೂಡಿ, ಅಮಿತ ಮೆಕ್ಕಳಕಿ, ಕರಿಸಿದ್ದ ವಂಟಗೂಡಿ, ಹಾಲಸಿದ್ಧ ವಂಟಗೂಡಿ, ವಿವೇಕ ವಂಟಗೂಡಿ ಸೇರಿ ಅನೇಕರು ಇದ್ದರು. ರಾಯಬಾಗ: ತಾಲೂಕಿನ ಹಿಡಕಲ ಗ್ರಾಮದಲ್ಲಿ ಭಕ್ತ ಕನಕದಾಸರ ಜಯಂತಿ ಆಚರಿಸಲಾಯಿತು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 