ಬೈಲಹೊಂಗಲ

ರಸ್ತೆ ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಿ: ಮುಂಡಾಸ

ರಸ್ತೆ ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಿ: ಮುಂಡಾಸ

ಬೈಲಹೊಂಗಲ  19: ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮೂಲಕ ಜೀವವನ್ನು ಉಳಿಸುವುದು ನಮ್ಮ ಮೊದಲ ಕರ್ತವ್ಯವಾಗಿರುತ್ತದೆ ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗೇಶ ಮುಂಡಾಸ  ಹೇಳಿದರು.

ಅವರು ಪಟ್ಟಣದ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರಂಭದ ಅಧ್ಯಕ್ಷತೆ ವಹಿಸಿ  ಮಾತನಾಡಿ,  ಪ್ರತಿಯೊಬ್ಬರೂ ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಬೇಕು, ವಾಹನ ಚಾಲನೆ ಸಮಯದಲ್ಲಿ ಮೊಬೈಲ್ ಬಳಸಬಾರದು ಹಾಗೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದರ ಜೊತೆಗೆ ವಾಹನಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ತಮ್ಮ ಬಳಿ ಹೊಂದಿರಬೇಕು. ವಾಹನಗಳನ್ನು ಜಾಗರೂಕತೆಯಿಂದ ಚಲಾಯಿಸಬೇಕು ಎಂದು ಸಲಹೆ ನೀಡಿದರು.

ಮೋಟಾರು ವಾಹನ ನೀರಿಕ್ಷಕರಾದ ಎಂ.ಕೆ.ಮಠಪತಿ, ಸುಪರಿಡೆಂಟ್ ಅವಿನಾಶ ಕಾವೇರಿ, ಕಚೇರಿ ಸಿಬ್ಬಂದಿ ಶ್ರೀಧರಮೂರ್ತಿ ಹಾಗೂ, ವಾಹನಗಳ ಚಾಲಕರು, ಮಾಲೀಕರು ಸಾರ್ವಜನಿಕರು ಇದ್ದರು.


ಸುದ್ದಿ ಓದಿ