ಯರಗಟ್ಟಿ

ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಮಹೇಶ ಭಜಂತ್ರಿ

ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಮಹೇಶ ಭಜಂತ್ರಿ

          ಯರಗಟ್ಟಿ 27 : ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ತಾಲೂಕಾ ಆಡಳಿತದಿಂದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.

         ಅವರ ಜೀವನ ಸಂದೇಶಗಳು ಸತ್ಯ, ಧರ್ಮ, ನ್ಯಾಯ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುತ್ತವೆ. ಯುವಪೀಳಿಗೆ ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು. ಸಮಾಜದ ಮುಖಂಡರಾದ ಎಸ್‌. ಎಚ್‌. ನಾಯ್ಕರ ಮಾತನಾಡಿದರು.

          ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯವು ಭಾರತೀಯ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಗಣ್ಯಮಾನ್ಯರು ಹಾಗೂ ಎಸ್‌.ಎಸ್‌.ಎಲ್‌.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಚಿತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾತು. 


ಸುದ್ದಿ ಓದಿ