ಪರಿಸರಕ್ಕೆ ಹಾನಿಯಾಗುವ ವಸ್ತುಗಳ ಬಳಕೆಯನ್ನು ತೊರೆದು ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು
Everyone should join hands in protecting the environment by abandoning the use of environmentally ha
ಲೋಕದರ್ಶನ ವರದಿ
ವಿಜಯಪುರ 08: ಪರಿಸರವು ಪ್ರತಿಯೊಂದು ಜೀವಿಯ ಉಸಿರಾಗಿದ್ದು, ಅದರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪರಿಸರಕ್ಕೆ ಹಾನಿಯಾಗುವ ವಸ್ತುಗಳ ಬಳಕೆಯನ್ನು ತೊರೆದು ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಹಾಗೂ ಮುಖ್ಯಸ್ಥೆ ಪ್ರೊ. ಲಕ್ಷ್ಮೀದೇವಿ ವಾಯ್ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯಯ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ “ಅಹಲ್ಯೆಯ ನಡಿಗೆ ಗ್ರಾಮದ ಕಡೆಗೆ” ಎಂಬ ಧ್ಯೇಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 5ರಂದು ಹಮ್ಮಿಕೊಂಡಿದ್ದ ತಾಜಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವಿಕೆ ಹಾಗೂ ಮಕ್ಕಳಿಗೆ ಪರಿಸರ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮದ ಸಮಗ್ರ ಅಧ್ಯಯನ ಹಾಗೂ ಅಭಿವೃದ್ಧಿ ಉದ್ದೇಶದಿಂದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಶಾಲೆ ಮತ್ತು ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಂದ್ರಶೇಖರ ಬಿದರಿ ಮಾತನಾಡಿ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸರ್ಕಾರ ಜಾರಿಗೊಳಿಸಿರುವ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದ ಪ್ರಯೋಜನಗಳನ್ನು ಸದುಪಯೋಗಪಡಿಸಿಕೊಂಡು ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಚಂದ್ರಕಾಂತ ದೊಡಮನಿ ಮಾತನಾಡಿ, ಇಂದಿನ ಮಕ್ಕಳು ನಾಳಿನ ಉತ್ತಮ ನಾಗರಿಕರಾಗಿದ್ದು, ಪರಿಸರ ಕುರಿತು ಮಕ್ಕಳಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಡಾ. ಶಶಿಕಲಾ ರಾಠೋಡ, ಅಂಬಿಕಾ ಮಾಲಗಾರ, ಕಾವೇರಿ ಇಂಡಿಕರ, ಶಾಲಾ ಶಿಕ್ಷಕರು ಹಾಗೂ ಗ್ರಾಮದ ಜನರು ಮತ್ತಿತರು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿನಿ ಸಾಕ್ಷಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಡಾ. ಭಾಗ್ಯಶ್ರೀ ದೊಡಮನಿ ನಿರೂಪಿಸಿದರು. ಡಾ. ಸರೋಜಾ ಸಂತಿ ವಂದಿಸಿದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ 