ಭಾರತದ ಸಂವಿಧಾನದ ಮಹತ್ವ ಪ್ರತಿಯೊಬ್ಬರು ಅರಿತುಕೊಳ್ಳಿ
ಬಳ್ಳಾರಿ: ಬೇರೆ ಬೇರೆ ಧರ್ಮಗಳಿಗೆ ಹೇಗೆ ತಮ್ಮದೇ ಆದ ಧರ್ಮಗ್ರಂಥಗಳಿವೆಯೋ. ಅದೇ ರೀತಿ ಪ್ರಜಾಸತ್ತಾತ್ಮಕ ದೇಶವಾದ ನಮ್ಮ ದೇಶಕ್ಕೆ ಸಂವಿಧಾನವಿದೆ. ಈ ಸಂವಿಧಾನವೇ ನಮ್ಮನ್ನು ರಕ್ಷಿಸುತ್ತದೆ. ಹಾಗಾಗಿ ಭಾರತದ ಪ್ರಜೆಗಳಾದ ಪ್ರತಿಯೊಬ್ಬ ನಾಗರಿಕರು ಸಂವಿಧಾನದ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಬಿ.ಶ್ರೀನಿವಾಸಮೂರ್ತಿ ಅವರು ಅಭಿಪ್ರಾಯಪಟ್ಟರು.
ಅವರು ಸ್ಥಳೀಯ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಸ್ವಾಯತ್ತ ಕಾಲೇಜಿನಲ್ಲಿಂದು ರಾಜ್ಯಶಾಸ್ತ್ರ ವಿಭಾಗ ಮತ್ತು ಮತದಾರರ ಸಾಕ್ಷರತಾ ಕ್ಲಬ್ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “ಭಾರತ ಸಂವಿಧಾನ ದಿನಾಚರಣೆ” ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ವೈ.ಜನಾರ್ಧನರೆಡ್ಡಿ ಅವರು ಮಾತನಾಡಿ, ಭಾರತದ ಸಂವಿಧಾನವು ಪರಮೋಚ್ಛ ಗ್ರಂಥವಾಗಿದೆ. ವಿದ್ಯಾರ್ಥಿಗಳು ಸಂವಿಧಾನವನ್ನು ಓದುವ ಮೂಲಕ ಭಾರತದ ನಾಗರಿಕರ ಮೂಲಭೂತ ಹಕ್ಕುಗಳು, ಕರ್ತವ್ಯಗಳು, ಮತದಾನ, ಸರ್ಕಾರ ಮುಂತಾದ ವಿಷಯಗಳನ್ನು ತಿಳಿಯಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜುನಾಥರೆಡ್ಡಿ ಹೆಚ್.ಕೆ ಅವರು ಮಾತನಾಡಿ, ಪ್ರತಿಯೊಬ್ಬರಿಗೂ ಸಂವಿಧಾನದ ಮಹತ್ವವನ್ನು ತಿಳಿಸುವ ಕಾರ್ಯವನ್ನು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಂವಿಧಾನಕ್ಕೆ ಸಂಬಂಧಿಸಿದ ಕೃತಿಗಳನ್ನು ಅಧ್ಯಯನ ಮಾಡಬೇಕು. ಆ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಬೇಕೆಂದರು.
ವೇದಿಕೆಯಲ್ಲಿ ಪರೀಕ್ಷಾ ನಿಯಂತ್ರಕರಾದ ಶೋಭಾರಾಣಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಆರ್.ಮನೋಹರನ್, ಎಸ್.ಎಂ.ರಮೇಶ್, ಡಾ.ಸುಜಾತ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಎಲ್ಲ ಪ್ರಾಂಶುಪಾಲರು, ಪ್ರಾಧ್ಯಾಪಕರು ಪುಷ್ಪವನ್ನು ಅರ್ಿಸಿ ಗೌರವ ಸಮರ್ಿಸಿದರು. ನಂತರ ಕನ್ನಡ ಉಪನ್ಯಾಸಕ ಡಾ.ಕೆ.ಬಸಪ್ಪ ಅವರು ಆರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಡಾ.ಟಿ.ದುರುಗಪ್ಪ ಕಾರ್ಯಕ್ರಮ ನಿರೂಪಿಸಿದರು. ಡಾ.ಕಾವಲ್ಲಯ್ಯ ಸಿ ಸ್ವಾಗತಿಸಿದರು. ಕೊನೆಯಲ್ಲಿ ಕೆ.ಶೇಷಣ್ಣ ಅವರು ವಂದಿಸಿದರು.