ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು:ಶಿವಾನಂದ ಪತ್ತಾರ
ಲೋಕದರ್ಶನ ವರದಿ
ಬೆಟಗೇರಿ 01 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು. ಸ್ಥಳೀಯ ಸಾರ್ವಜನಿಕ ಸ್ಥಳಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಎಲ್ಲಿ ಬೇಕಾದಲ್ಲಿ ಎಸೆಯಬಾರದು. ಕಸದ ತೊಟ್ಟಿಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಹಾಕಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಶಿವಾನಂದ ಪತ್ತಾರ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಅ.1ರಂದು ನಡೆದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಅಭಿಯಾನದ ಪ್ರಯುಕ್ತ ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಶ್ರಮದಾನದ ಘೋಷ ವಾಕ್ಯದಡಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ಥಳೀಯ ಮನೆ, ಅಂಗಡಿ, ಮುಂಗಟ್ಟುದಾರ ಹಾಗೂ ಸ್ಥಳೀಯರು ಹಸಿ ಮತ್ತು ಒಣ ಕಸಗಳನ್ನು ಬೇರೆ ಬೇರೆ ಮಾಡಿ ಕಸ ತುಂಬುವ ವಾಹನ ತಮ್ಮ ಬಳಿ ಬಂದಾಗ ವಾಹನದಲ್ಲಿ ಹಾಕಬೇಕು. ಸ್ಥಳೀಯರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದರು.
ಇಲ್ಲಿಯ ಗ್ರಾಪಂ ಕಾರ್ಯದರ್ಶಿ ಎಮ್.ಪಿ.ತಳವಾರ, ಬಸವರಾಜ ಪಣದಿ, ರಮೇಶ ನೀಲಣ್ಣವರ, ಈಶ್ವರ ಮುಧೋಳ, ನಾಗಪ್ಪ ಜಾನಕಿ, ವಿಠಲ ಚಂದರಗಿ, ಶಿವಾನಂದ ಐದುಡ್ಡಿ, ಈರಣ್ಣ ದಂಡಿನ, ಮೇಳೆಪ್ಪ ಹರಿಜನ, ಸಾಂವಕ್ಕ ಹರಿಜನ, ಗ್ರಾಪಂ ಎಲ್ಲಾ ಸಿಬ್ಬಂದಿ, ಸ್ಥಳೀಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಗ್ರಾಪಂ ಸಿಬ್ಬಂದಿ, ಸ್ಥಳೀಯರು ಇದ್ದರು.