ದೀರ್ಘ ಕೋಮಾ ಸ್ಥಿತಿಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ
ನವದೆಹಲಿ, ಆಗುಸ್ಟ್ 23: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ ಸುಧಾರಣೆಯಾಗಿಲ್ಲ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದೂ ಸೇನಾ ಆಸ್ಪತ್ರೆ ಆಸ್ಪತ್ರೆ ಮೂಲಗಳು ಹೇಳಿವೆ ಅವರು ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ. ಸಹಜ ಉಸಿರಾಟ ವ್ಯವಸ್ಥೆಯ ಸುಧಾರಣೆಗಾಗಿ ಚಿಕಿತ್ಸೆ ನಡೆಯುತ್ತಿದೆ. ಮಿದುಳಿನಲ್ಲಿ ಹೆಪ್ಪುಗಟ್ಟಿದ ರಕ್ತವನ್ನು ತೆಗೆಯುವ ಶಸ್ತ್ರಚಿಕಿತ್ಸೆಗಾಗಿ ಪ್ರಣವ್ ಮುಖರ್ಜಿ ಅವರು ಕಳದೆ 10 ರಂದು ದೆಹಲಿಯ ಸೇನಾ ರೆಫೆರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಪ್ರಣವ್ ಅವರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರ ಆರೋಗ್ಯದ ಮೇಲೆ ತಜ್ಞ ವೈದ್ಯರ ತಂಡ ತೀವ್ರ ನಿಗಾ ಇರಿಸಿದೆ. ಪ್ರಣವ್ ಮುಖರ್ಜಿ 2012ರಿಂದ 2017ರ ವರೆಗೆ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.