ಪರೀಕ್ಷೆ ಅಂಕಕ್ಕಲ್ಲ ಜ್ಞಾನಕ್ಕೆ: ಮುಗನೂರಮಠ
Exams are for knowledge, not marks: Muganuramatha
ಲೋಕದರ್ಶನ ವರದಿ
ಬಾಗಲಕೋಟೆ, ಸೆ.19: ಪರೀಕ್ಷೆ ಎನ್ನುವುದು ಕೇವಲ ಅಂಕಪಟ್ಟಿಗೆ ಸಂಬಂಧಿಸಿದ ವಿಷಯವಲ್ಲ. ಮಕ್ಕಳಲ್ಲಿ ಪಡೆದುಕೊಂಡಿರುವ ಜ್ಞಾನದ ಮೇಲೆ ಅವಲಂಬಿತವಾಗಿದೆ ಎಂದು ಪ್ರಾಚಾರ್ಯ ಎಸ್.ಆರ್. ಮುಗನೂರಮಠ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಪದವಿ ಪೂರ್ವ ಕಲಾ ಮಹಾವಿದ್ಯಾಲಯದಲ್ಲಿ ಮಕ್ಕಳ ಶಿಕ್ಷಣಾಭಿವೃದ್ಧಿಗಾಗಿ ವಿದ್ಯಾರ್ಥಿಗಳು ಹಾಗೂ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರೂ ಜವಾಬ್ದಾರರಾಗಬೇಕು. ಮನೆಯಲ್ಲಿ ಮಕ್ಕಳು ಓದುವ ಸಂದರ್ಭದಲ್ಲಿ ಟಿವಿ, ಮೊಬೈಲ್ ಬಳಕೆಯಿಂದ ಅವರ ಏಕಾಗ್ರತೆಗೆ ಭಂಗವಾಗಬಹುದು. ಆದ್ದರಿಂದ ಅಧ್ಯಯನಕ್ಕೆ ಪ್ರತ್ಯೇಕ ಸ್ಥಳ ಕಲ್ಪಿಸಬೇಕು. ರಾತ್ರಿ ಓದಿದ ಪಾಠಗಳನ್ನು ಬೆಳಗ್ಗೆ ಪುನರಾವರ್ತನೆ ಮಾಡುವುದರಿಂದ ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಪಾಲಕರ ಕಷ್ಟಗಳನ್ನು ಅರಿತುಕೊಂಡು ಅಧ್ಯಯನದಲ್ಲಿ ಶ್ರಮಿಸಬೇಕು. ಭವಿಷ್ಯದ ಬುನಾದಿಗೆ ತಂದೆ-ತಾಯಿ ಹಾಗೂ ಗುರುಗಳು ಅಡಿಪಾಯವಾಗಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಐಕ್ಯೂಎಸಿ ಘಟಕದ ಸಂಯೋಜಕ ಡಾ. ಎ.ಯು. ರಾಠೋಡ, ಪಿಯುಸಿ ವಿಭಾಗದ ಎಸ್.ಎಂ. ಚಿಮ್ಮಲಗಿ, ಎಸ್.ಕೆ. ಪವಾರ್, ಬೋಧಕ-ಬೋಧಕೇತರ ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 