ಬಿಜೆಪಿ ಬಳ್ಳಾರಿ ನಗರ ಘಟಕದ ಕಾರ್ಯಕಾರಣಿ ಸಭೆ
ಲೋಕದರ್ಶನ ವರದಿ
ಬಳ್ಳಾರಿ 24: ಭಾರತೀಯ ಜನತಾ ಪಾರ್ಟಿ ಬಳ್ಳಾರಿ ನಗರ ಘಟಕದ ಅಧ್ಯಕ್ಷ ಕೆ.ವಿ.ವೆಂಕಟೇಶ್ವರ ಅವರ ಅಧ್ಯಕ್ಷತೆಯಲ್ಲಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಎಸ್.ಪಿ. ವೃತ್ತದಲ್ಲಿರುವ ಬಿಜೆಪಿ ಕಛೇರಿಯಲ್ಲಿ ದಿ. 24ರಂದು ನಡೆಸಲಾಯಿತು.
ಸಭೆಗೆ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ನಾಯುಡು, ಮಹಾನಗರ ಪಾಲಿಕೆ ಸದಸ್ಯ ಶ್ರೀನಿವಾಸ್ ಮೋತ್ಕರ್, ನಗರದ ಉಸ್ತುವಾರಿ, ಜಿಲ್ಲಾ ಉಪಾಧ್ಯಕ್ಷರಾದ ಡಾ. ಅರುಣಾ ಕಾಮಿನೇನಿ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ತಿಪ್ಪಣ್ಣ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಕೆ. ರಾಮಂಜಿನಿ, ಪಾಲಿಕೆ ಸದಸ್ಯ ಕೆ. ಎಸ್. ಅಶೋಕ್ ಕುಮಾರ್, ಅವರು ಸಭೆಯಲ್ಲಿ ಹಾಜರಿದ್ದು ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ನಗರ ಉಪಾಧ್ಯಕ್ಷೆ ಪುಷ್ಪಲತಾ, ಕೇದಾರ ಸ್ವಾಮಿ, ವಸಂತ ಕುಮಾರ್, ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು