ಪ್ರವಾಹ ಸಂತ್ರಸ್ತರಿಗೆ ದಂಡದಿಂದ ವಿನಾಯಿತಿ ಕೊಡಿ'
ಬೆಳಗಾವಿ, 11: ವಾಹನ ಸವಾರರಿಗೆ ಪ್ರಸ್ತುತ ಜಾರಿಯಲ್ಲಿರುವ ದಂಡದ ಪ್ರಮಾಣದಲ್ಲಿ ಪ್ರವಾಹ ಸಂತ್ರಸ್ತರಿಗೆ ವಿನಾಯಿತಿ ನೀಡುವಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿನಂತಿಸಿದ್ದಾರೆ.
ಈ ಸಂಬಂಧ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿರುವ ಅವರು, ವಿಶೇಷವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರು ಪ್ರವಾಹದಿಂದ ಕಂಗೆಟ್ಟಿದ್ದಾರೆ. ಮನೆಗಳನ್ನು ಕಳೆದುಕೊಂಡಿದ್ದಾರೆ. ಹಲವಾರು ದಾಖಲೆಗಳನ್ನು ಕಳೆದುಕೊಂಡಿದ್ದಾರೆ. ಮನೆಯಲ್ಲಿರುವ ಸಾಮಗ್ರಿಗಳನ್ನು, ಬಟ್ಟೆಗಳನ್ನು ಕಳೆದುಕೊಂಡಿದ್ದಾರೆ. ಸಂಪೂರ್ಣ ಬದುಕನ್ನು ಹೊಸದಾಗಿ ಕಟ್ಟಿಕೊಳ್ಳಲು ಹೋರಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಧವಸ ಧಾನ್ಯ ಸೇರಿದಂತೆ ಬೇಕಾದ ಸಾಮಗ್ರಿಗಳನ್ನು ಬೈಕ್ ಮತ್ತಿತರ ಸ್ವಂತ ವಾಹನಗಳಲ್ಲಿ ಸಾಗಿಸಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ಈಗ ಅವರಿಗೆ ದುಭಾರಿ ದಂಡ ವಿಧಿಸಿದರೆ ಅವರು ತುಂಬುವಷ್ಟು ಅವರ ಆಥರ್ಿಕ ಸ್ಥಿತಿ ಗಟ್ಟಿಯಾಗಿರುವುದಿಲ್ಲ. ಹಾಗಾಗಿ ಅವರಿಗೆ ಈ ಸಂದರ್ಭದಲ್ಲಿ ದುಭಾರಿ ದಂಡ ವಿಧಿಸುವುದು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಮಾನವೀಯತೆಯ ದೃಷ್ಟಿಯಿಂದ ಅವರಿಗೆ ಸಂಚಾರ ನಿಯಮ ಉಲ್ಲಂಘನೆಯ ದಂಡ ವಿಧಿಸುವಾಗ ವಿನಾಯಿತಿ ನೀಡಬೇಕು ಎಂದು ವಿನಂತಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳಕರ್ ಪರವಾಗಿ ಅವರ ಪುತ್ರ, ಯುವಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಪೊಲೀಸ್ ಆಯುಕ್ತ ಲೋಕೇಶ್ ಕುಮಾರ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದರು. ಪೊಲೀಸ್ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 