ಹೊರ ರಾಜ್ಯದವರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ.
ಬೆಂಗಳೂರು, ಮೇ 26, ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ಯಾವುದೇ ವ್ಯಕ್ತಿ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಎಂಬ ವರದಿ ಹೊಂದಿದ್ದರೆ, ಬಂದಿದ್ದರೆ ಅಂತಹವರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ,ರಾಜಸ್ಥಾನ ಹಾಗೂ ಮಧ್ಯಪ್ರದೇಶದಿಂದ ಬರುವವರಿಗೆ ಕಡ್ಡಾಯವಾಗಿ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು ಎನ್ನಲಾಗಿದೆ.
ಉಳಿದ ರಾಜ್ಯಗಳಿಂದ ಬರುವವರು 14 ದಿನಗಳ ಕಾಲ ಹೋಂ ಕ್ವಾರಂಟೈನ್ ಗೆ ಒಳಪಡಬೇಕು ಎಂದು ಸರ್ಕಾರ ಈ ಮೊದಲು ಹೇಳಿದ್ದರೂ ಇದೀಗ ಯಾವುದೇ ರಾಜ್ಯದಿಂದ ಬಂದರೂ ಅವರ ವೈದಕೀಯ ಫಲಿತಾಂಶ ವರದಿ ನೆಗೆಟಿವ್ ಎಂದು ಬಂದರೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ ಎಂದು ಹೇಳಿದೆ.ಯಾವುದೇ ರಾಜ್ಯದಿಂದ ಆಗಮಿಸುವ ವ್ಯಕ್ತಿಯು ಐಸಿಎಂಆರ್ ನಿಂದ ಅಂಗೀಕೃತವಾಗಿರುವ ಪ್ರಯೋಗಾಲಯಗಳಿಂದ ಕೊರೊನಾ ಪರೀಕ್ಷೆ ಮಾಡಿಸಿರುವ ಬಗ್ಗೆ ನೆಗೆಟಿವ್ ವರದಿ ಸಲ್ಲಿಸಿದರೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗುವುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 