ಲಾಕ್ ಡೌನ್ ನಿಂದ ಕೃಷಿ ಮಳಿಗೆಗಳು, ಚಹಾ ಕೈಗಾರಿಕೆಗಳಿಗೆ ವಿನಾಯಿತಿ: ಕೇಂದ್ರದ ಆದೇಶ
ನವದೆಹಲಿ, ಏ 4, ಕೋವಿಡ್ 19 ಹಿನ್ನೆಲೆಯಲ್ಲಿ ದೇಶಾದ್ಯಂತ ಘೋಷಿಸಿರುವ ಲಾಕ್ ಡೌನ್ ನಿಂದ ಕೃಷಿ ಸಂಬಂಧಿತ ಅಂಗಡಿಗಳು, ಚಹಾ ಕೈಗಾರಿಕೆ ಮತ್ತಿತರ ಕೆಲ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಈ ಕುರಿತು ನಾಲ್ಕನೇ ಹೆಚ್ಚುವರಿ ವಿನಾಯಿತಿ ಮಾರ್ಗಸೂಚಿ ಹೊರಡಿಸಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾಳ್ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ಹೆದ್ದಾರಿಗಳಲ್ಲಿ ಪೆಟ್ರೋಲ್ ಬಂಕ್ ಗಳು, ಸರಕು ಸಾಗಾಣೆ ವಾಹನಗಳ ದುರಸ್ತಿ ಅಂಗಡಿಗಳು, ಚಹಾ ಕೈಗಾರಿಕೆಗೆ ವಿನಾಯಿತಿ ಕೊಡಲಾಗಿದೆ. ಚಹಾ ಪ್ಲಾಂಟೇಷನ್ ಗಳಲ್ಲಿ ಗರಿಷ್ಠ ಶೇ 50 ರಷ್ಟು ಮಂದಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ವಿನಾಯಿತಿ ನೀಡಿರುವ ಸೇವೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಸಹ ಸಲಹೆ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 