ಜಿಲ್ಲಾ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ
Exhibition of District Level Postage Stamps
ಬೆಳಗಾವಿ ಡಿ.30: ಬೆಳಗಾವಿ ವಿಭಾಗದ ಭಾರತೀಯ ಅಂಚೆ ಇಲಾಖೆ ಇವರ ವತಿಯಿಂದ ಜಿಲ್ಲಾಮಟ್ಟದ ಅಂಚೆ ಚೀಟಿಗಳ ಪ್ರದರ್ಶನವನ್ನು ನಗರದ ಹಿಂದವಾಡಿ ಮಹಾವೀರ ಭವನದಲ್ಲಿ ದಿನಾಂಕ. 08-01-2025 ರಿಂದ 10-01-2025 ರವರೆಗೆ ಆಯೋಜಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಕಬ್ಬು ಬೆಳೆಯುತ್ತಾರೆ ಮತ್ತು ಹೆಚ್ಚು ಸಕ್ಕರೆ ಕಾರ್ಖಾನೆಗಳಿವೆ. ಆದ್ದರಿಂದ ಈ ಪ್ರದರ್ಶನವನ್ನು “ಋಣಠಿಜಥ2025” ಎಂದು ನಾಮಕರಣ ಮಾಡಲಾಗಿದೆ. ಈ ಪ್ರದರ್ಶನದ ವೇಳೆಯಲ್ಲಿ 150 ಫ್ರೇಮಗಳಲ್ಲಿ ವಿವಿಧ ವಿಷಯಗಳನ್ನು ಒಳಗೊಂಡ ಹಾಗೂ ಅತ್ಯಂತ ಪುರಾತನ ಹಾಗೂ ವಿವಿಧ ದೇಶಗಳ ಅಂಚೆ ಚೀಟಿಗಳ ಪ್ರದರ್ಶನವನ್ನು ಕೂಡ ಏರಿ್ಡಸಲಾಗಿದೆ. ಈ ಸಂದರ್ಭದಲ್ಲಿ ಅಂಚೆ ಇಲಾಖೆಯಿಂದ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ವಿಶೇಷ ಅಂಚೆ ಲಕೋಟೆಗಳು ಹಾಗೂ ಛಾಯಾಚಿತ್ರ ಪೋಸ್ಟಕಾರ್ಡಗಳನ್ನು ಬಿಡುಗಡೆಗೊಳಿಸಲಾಗುವುದು ಹಾಗೂ ವಿಶೇಷವಾಗಿ ಶಾಲಾ ಮಕ್ಕಳಿಗೆ ಸ್ಪರ್ಧೆಗಳನ್ನು ನಡೆಸಲಾಗುವುದು.
ದಿನಾಂಕ. 08-01-2025 ರಂದು ತಮ್ಮ ಸ್ವಂತ ಡ್ರಾಯಿಂಗ ಪೇಪರ ಬಳಸಿ ಬೆಳಗಾವಿಯ ಐತಿಹಾಸಿಕ ಸ್ಥಳಗಳ ವಿಷಯದ ಮೇಲೆ ಅಂಚೆ ಚೀಟಿಗಳ ವಿನ್ಯಾಸಗೊಳಿಸುವ ಸ್ಪರ್ಧೆ ಆಯೋಜಿಸಲಾಗಿದೆ.
ದಿನಾಂಕ. 09-01-2025 ರಂದು ಸಮಾಜದಲ್ಲಿ ಅಂಚೆ ಕಛೇರಿಗಳ ಪಾತ್ರ ವಿಷಯದ ಮೇಲೆ ಂ4 ಗಾತ್ರದ ಕಾಗದದ ಮೇಲೆ 500 ಶಬ್ಧಗಳನ್ನು ಮೀರದಂತೆ ಪತ್ರ ಬರೆಯುವ ಸ್ಪರ್ಧೆ ಇರುತ್ತದೆ.
ದಿನಾಂಕ : 10-01-2025 ಅಂಚೆ ಚೀಟಿಗಳ ಸಂಗ್ರಹಕ್ಕೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆ ನಡೆಸಲಾಗುವುದು.
ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ಸಾರ್ವಜನಿಕರಿಗೂ ಕೂಡ ಪ್ರದರ್ಶನವನ್ನು ವೀಕ್ಷಿಸಲು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಮುಕ್ತ ಅವಕಾಶವಿರುತ್ತದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಬೆಳಗಾವಿ ವಿಭಾಗ ಅಂಚೆ ಅಧೀಕ್ಷಕರ ಕಾರಾ್ಯಲಯದ ಅಧೀಕ್ಷಕರಾದ ವಿಜಯ ವಾದೋನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 