ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ವಸ್ತುಪ್ರದರ್ಶನ
ಬಳ್ಳಾರಿ 25: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಸಕರ್ಾರ ಕಳೆದ 7 ತಿಂಗಳ ಅವಧಿಯಲ್ಲಿ ರೂಪಿಸಿದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸಿ, ಅದರ ಪ್ರಯೋಜನಗಳ ಕುರಿತು ವಸ್ತು ಪ್ರದರ್ಶನವನ್ನು ಸೋಮವಾರ ನಗರದ ಕೇಂದ್ರ ಈಶಾನ್ಯಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಸಕರ್ಾರದ ಯೋಜನೆಗಳ ಸುಪಯೋಗ ಪಡೆದುಕೊಳ್ಳಬೇಕು. ಈ ಕೇಂದ್ರ ಬಸ್ ನಿಲ್ದಾಣದಲ್ಲಿ ಫೆ.25 ರಿಂದ ಫೆ.27ರವರೆಗೆ ವಸ್ತು ಪ್ರದರ್ಶನ ನಡೆಯಲಿದೆ. ಇಂತಹ ಕಾರ್ಯಕ್ರಮಗಳಿಂದ ಸಕರ್ಾರ ರೂಪಿಸಿದ ಯೋಜನೆಗಳ ಮಾಹಿತಿ ಸಾರ್ವಜನಿಕರಿಗೆ ಸಿಗುವದರಿಂದ ಅವುಗಳ ಸಮರ್ಪಕವಾಗಿ ಜಾರಿಯಾಗಲು ಸಹಕಾರಿಯಾಗಲಿದೆ ಎಂದರು.
ವಸ್ತು ಪ್ರದರ್ಶನದಲ್ಲಿ ಸಕರ್ಾರವು ವಿವಿಧ ಯೋಜನೆಗಳಾದ ಮುಖ್ಯಮಂತ್ರಿ ಮಾತೃಶ್ರೀ ಯೋಜನೆ, ಬೀದಿ ಬದಿ ವ್ಯಾಪರಿಗಳಿಗೆ ಗರಿಷ್ಠ 10 ಸಾವಿರ ರೂ. ಬಡ್ಡಿ ರಹಿತ ಸಾಲ ಸೌಲಭ್ಯ ಯೋಜನೆಯಾದ ಬಡವರ ಬಂಧು, ನಿರುದ್ಯೋಗ ನಿವಾರಣೆಗೆ ನಿಶ್ಚಯ ನಡೆ, 9 ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ ಸ್ಥಾಪನೆ, ಸಂಧ್ಯಾ ಸುರಕ್ಷಾ ಯೋಜನೆ, ಆಧುನಿಕ ಕೃಷಿ ಪದ್ಧತಿಗೆ ಆದ್ಯತೆ, ಹಸಿರು ಕನರ್ಾಟಕ, ಆಯುಷ್ಮಾನ್ ಭಾರತ ಆರೋಗ್ಯ ಕನರ್ಾಟಕ, ಕಾಯಕ ಬಡ್ಡಿ ರಹಿತ ಸಾಲ ಹಾಗೂ ಇನ್ನೂ ಅನೇಕ ಜನಪರ ಯೋಜನೆಗಳನ್ನು ಸಾರ್ವಜನಿಕರು ವೀಕ್ಷಿಸಲು ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಬೇರೆ ಬೇರೆ ಗ್ರಾಮಗಳಿಂದ ಬಸ್ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರಿಗೆ ಸಹ ವಸ್ತು ಪ್ರದರ್ಶನವನ್ನು ವೀಕ್ಷಿಸುವ ಮೂಲಕ ಯೋಜನೆಗಳನ್ನು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಈಶಾನ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಳ್ಳಾರಿ ಜಿಲ್ಲಾ ಅಧಿಕಾರಿ ಎಸ್.ಆರ್.ಚಂದ್ರಶೇಖರ್, ಪ್ರಭಾರಿ ಡಿಟಿಒ ಕೃಷ್ಣಮೂರ್ತಿ 1ನೇ ಮತ್ತು 2ನೇ ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿ.ಸಿ.ಗುರುರಾಜ್, ಹೆಚ್.ವಿಜಯ್ ಕುಮಾರ್ ಸೇರಿದಂತೆ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.