ಅಂತರರಾಷ್ಟ್ರೀಯ

ಬಾಂಗ್ಲಾದೇಶದ ಕಂಟೈನರ್ ಡಿಪೋದಲ್ಲಿ ಸ್ಫೋಟ, 14 ಸಾವು

ಬಾಂಗ್ಲಾದೇಶದ ಕಂಟೈನರ್ ಡಿಪೋದಲ್ಲಿ ಸ್ಫೋಟ, 14 ಸಾವು

ಢಾಕಾ: ಜೂನ್ 5 : ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿರುವ ಕಂಟೈನರ್ ಡಿಪೋದಲ್ಲಿ ತೈಲ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 14 ಮಂದಿ ಸಾವಿಗೀಡಾಗಿದ್ದಾರೆ. ಈ ದುರಂತದ ವೇಳೆ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಚಿತ್ತಗಾಂಗ್‌ನ ಸೀತಾಕುಂಡ ಪ್ರದೇಶದಲ್ಲಿ ಶನಿವಾರ ರಾತ್ರಿ ಸ್ಫೋಟ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಮೃತರಲ್ಲಿ ಡಿಪೋ ನೌಕರರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಸೇರಿದ್ದಾರೆ.

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಪ್ರಾಣಹಾನಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅಪಘಾತಕ್ಕೆ ಕಾರಣಗಳು ಇನ್ನಷ್ಟೇ ತಿಳಿದು ಬರಬೇಕಿದೆ.

ಸುದ್ದಿ ಓದಿ