ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಅವಧಿಯ ವಿಸ್ತರಣೆ
ಸಿರುಗುಪ್ಪ - ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ ಕ್ರಿಶ್ಚಿಯನ್ ಜೈನ್ ಸಿಖ್ ಬೌದ್ಧ ಪಾರ್ಸಿ ಸಮುದಾಯದವರಿಂದ ಎನ್ ಎಸ್ ಪಿ ಪೋರ್ಟಲ್ ನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಬಳ್ಳಾರಿ ಜಿಲ್ಲಾ ಅಧಿಕಾರಿಗಳು ಪ್ರಕಟಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ವಯಸ್ಕರ ಶಿಕ್ಷಣ ಸೆಂಟ್ರಲ್ ಕೌನ್ಸಿಲ್ ಮೈಸೂರು, ಜಿಲ್ಲಾ ಸಾಕ್ಷರತಾ ಸಮಿತಿ ಸದಸ್ಯರು ಸಮಾಜ ಸುಧಾರಕ ಅಬ್ದುಲ್ ನಬಿ ತಿಳಿಸಿದ್ದಾರೆ. ಒಂದನೇ ತರಗತಿಯಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಪಿಯುಸಿಯಿಂದ ಪಿಎಚ್ ಡಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಗಳಿಗೆ ಮೆಟ್ರಿಕ್ ನಂತರದ ಹಾಗೂ ವೃತ್ತಿಪರ ಮತ್ತು ತಾಂತ್ರಿಕ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15 ಹಾಗೂ ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30ಆ ಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ದೂ.08392-245755ಮತ್ತು ಮೊ.8310321101,ಹೊಸಪೇಟೆ -8050435366,ಹರಪನಹಳ್ಳಿ -849492789,ಸಿರುಗುಪ್ಪ -9148889975,ಸಂಡೂರು -9036925966,ಹಗರಿಬೊಮ್ಮನಹಳ್ಳಿ -9980237242,ಹೂವಿನ ಹಡಗಲಿ -8050466370,ಕೂಡ್ಲಿಗಿ -9060330060, ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹೆಲ್ಪ್ ಡೆಸ್ಕ್ ನಂ .8277799990ಗೆ ಸಂಪರ್ಕಿಸಬಹುದು ಎಂದು ಶಿಕ್ಷಣ ಪ್ರೇಮಿ ಸಾಕ್ಷರತಾ ಅಬ್ದುಲ್ ನಬಿ ಅವರು ತಿಳಿಸಿದರು .