ಅವಧಿ ವಿಸ್ತರಣೆ
Extension of time: Karnataka State Akkamahadevi Women's University
ವಿಜಯಪುರ 28: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿಗಾಗಿ ಸಂಯೋಜನಾ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಇದೇ ನವೆಂಬರ್ 30ರ ಸಂಜೆ 5 ಗಂಟೆಯ ಒಳಗಾಗಿ ದಂಡ ಸಹಿತ ಶುಲ್ಕದೊಂದಿಗೆ ಸಂಯೋಜನಾ ಅರ್ಜಿಯನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬಹುದು.
2025-26ನೇ ಶೈಕ್ಷಣಿಕ ಸಾಲಿಗಾಗಿ ಸಂಯೋಜಿತ ಮಹಿಳಾ ಮಹಾವಿದ್ಯಾಲಯಗಳಿಂದ ಸ್ನಾತಕ/ ಸ್ನಾತಕೋತ್ತರ ಕೋರ್ಸುಗಳಿಗಾಗಿ, ವಿವಿಧ ಬಗೆಯ ಸಂಯೋಜನೆಗಾಗಿ ಹಾಗೂ ನೋಂದಾಯಿತ ಸಂಘ-ಸಂಸ್ಥೆಗಳು/ ಸಾರ್ವಜನಿಕ ಟ್ರಸ್ಟ್‌ಗಳಿಂದ ಹೊಸ ಮಹಿಳಾ ಮಹಾವಿದ್ಯಾಲಯ ಪ್ರಾರಂಭಕ್ಕಾಗಿ ಸಂಯೋಜನಾ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈಗ ಆ ದಿನಾಂಕಗಳನ್ನು ಮರುನಿಗದಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.kswu.ac.in ಸಂಪರ್ಕಿಸಬಹುದು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 