ಭಾರಿ ಮಳೆಗೆ ಹಾರೂಗೇರಿಯಲ್ಲಿ ಅಪಾರ ಹಾನಿ
Extensive damage in Harugeri due to heavy rain
ಲೋಕದರ್ಶನ ವರದಿ
ಹಾರೂಗೇರಿ 22: ಸೋಮವಾರ ಸಂಜೆ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಹಾರೂಗೇರಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪಾರ ಹಾನಿಯಾಗಿದೆ. ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿದ್ದು, ಗೋಡೆಗಳು ಕುಸಿದಿವೆ. ತಗಡಿನ ಶೆಡ್‌ಗಳು ಹಾನಿಗೊಳಗಾಗಿದ್ದು, ವಿದ್ಯುತ್ ಕಂಬಗಳು ಹಾಗೂ ಹಲವು ಕಟ್ಟಡಗಳಿಗೂ ಹಾನಿಯಾಗಿದೆ.
ಪಟ್ಟಣದ 3ನೇ ವಾರ್ಡ್ ನಿವಾಸಿ ಮಹಮ್ಮದ್ ಭಾಷಾ ಶೇಖ್ ಅವರ ಮನೆಯ ಮೇಲ್ಛಾವಣಿ ಹಾರಿಹೋಗಿದ್ದು, ಸುತ್ತಲಿನ ಗೋಡೆ ಕುಸಿದು ಹಾನಿಯಾಗಿದೆ. ಜನತಾ ಪ್ಲಾಟ್ ಹಾಗೂ ಬಡಿಗೇರ ಕಾಲೋನಿಗಳಲ್ಲಿಯೂ ಹಲವು ಮನೆಗಳ ಮೇಲ್ಛಾವಣಿಗಳು ಹಾನಿಗೊಂಡಿವೆ. ಘಟನೆಯ ವೇಳೆ ಮನೆಯಲ್ಲಿದ್ದವರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಧಾರಾಕಾರ ಮಳೆಯಿಂದ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ದಿನಬಳಕೆಯ ವಸ್ತುಗಳು, ಬಟ್ಟೆ, ಪಾತ್ರೆ, ಟಿವಿ, ಫ್ರಿಡ್ಜ್, ಕಂಪ್ಯೂಟರ್ ಸೇರಿದಂತೆ ಅನೇಕ ವಸ್ತುಗಳು ಹಾನಿಗೊಳಗಾಗಿವೆ. ಸಂಗ್ರಹಿಸಿಟ್ಟಿದ್ದ ಧವಸ-ಧಾನ್ಯಗಳೂ ಮಳೆ ನೀರಿನಿಂದ ನೆನೆದು ಹಾನೀಗೀಡಾಗಿವೆ. ಇದರಿಂದ ಹಲವು ಕುಟುಂಬಗಳಿಗೆ ಆರ್ಥಿಕ ನಷ್ಟ ಉಂಟಾಗಿದೆ.
ಮರಗಳು, ವಿದ್ಯುತ್ ಕಂಬಗಳು ಧರೆಗೆ
ಭಾರಿ ಮಳೆ ಮತ್ತು ಬಿರುಗಾಳಿಯ ರಭಸಕ್ಕೆ ಪಟ್ಟಣದಲ್ಲಿ ಬೃಹತ್ ಮರಗಳು ನೆಲಕ್ಕುರುಳಿವೆ. ಕೆಲವು ಕಡೆ ರಸ್ತೆಗಳ ಮೇಲೆಯೇ ಮರಗಳು ಬಿದ್ದಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ. 12ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದುಬಿದ್ದಿದ್ದು, 8 ಕಂಬಗಳು ನೆಲಕ್ಕುರುಳಿವೆ. ಇದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಭೇಟಿ ನೀಡಿ ಪರಿಸ್ಥಿತಿ ಪರೀಶೀಲಿಸಬೇಕು. ನಷ್ಟಕ್ಕೊಳಗಾದ ಕುಟುಂಬಗಳಿಗೆ ಸರ್ಕಾರದ ನಿಯಮಾನುಸಾರ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಳೆ ಮುಂದುವರಿದರೆ ಮತ್ತಷ್ಟು ಮರಗಳು, ದುರ್ಬಲ ಕಟ್ಟಡಗಳು ಹಾಗೂ ವಿದ್ಯುತ್ ಕಂಬಗಳು ಹಾನಿಗೊಳಗಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 