ಶಿಕ್ಷಕರಿಗೆ ಪಠ್ಯೇತರ ಚಟುವಟಿಕೆ ಸ್ವರ್ಧೆ
ಹೂವಿನ ಹಡಗಲಿ 08: ಶಿಕ್ಷಕರು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಗುಣಾತ್ಮಕ ಶಿಕ್ಷಣ ನೀಡಲು ಆದ್ಯತೆ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಹೇಳಿದರು.
ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 2024-25 ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆ ಸ್ವರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಪಠ್ಯೇತರ ಚಟುವಟಿಕೆಗಳು ಶಿಕ್ಷಕರಲ್ಲಿ ಬೋಧನಾ ನೈಪುಣ್ಯ ಹೆಚ್ಚಿಸಲು ಸಹಕಾರಿ ಆಗಲಿವೆ. ಚಿತ್ರಕಲೆ, ಪ್ರಬಂಧ, ಸಾಮಾನ್ಯ ಜ್ಞಾನ ವಿಜ್ಞಾನ ರಸಪ್ರಶ್ನೆ ಮೊದಲಾದ ವಿಷಯಗಳ ಸ್ಪರ್ಧೆಗಳು ಶಿಕ್ಷಕರ ಜ್ಞಾನ ವಿಕಾಸಕ್ಕೆ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿವೆ ಎಂದರು.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ,ತಾಲೂಕು ದೈಹಿಕ ಅಧೀಕ್ಷಕರಾದ ರಫಿ ಅಹಮದ್ ಖವಾಸ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯು ಆನಂದ್, ಕಾರ್ಯದರ್ಶಿ ವಿ ಯೇಸು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ ಶಿವಲಿಂಗಪ್ಪ, ಬಡ್ತಿ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ ಶೇಕ್ ಅಹಮದ್, ಸರ್ಕಾರಿ ನೌಕರರ ಸಂಘದ ನೂತನ ನಿರ್ದೇಶಕರಾದ ವಿ ಬಿ ಜಗದೀಶ್, ಜಿ ಜಗದೀಶ್, ಗಡ್ಡಿ ಶಿವಕುಮಾರ್, ಕಸಾಪ ಅಧ್ಯಕ್ಷ ಟಿ ಪಿ ವೀರೇಂದ್ರ ಇತರರು ಉಪಸ್ಥಿತರಿದ್ದರು.
ಶಾಲೆಯ ಉಪ ಪ್ರಾಂಶುಪಾಲ ರವೀಂದ್ರನಾಥ ಅಧ್ಯಕ್ಷತೆ ವಹಿಸಿದ್ದರು.ಸಿ ಆರ್ ಪಿ ಚನ್ನವೀರನ ಗೌಡ ಶಿಕ್ಷಣ ಸಂಯೋಜಕ ಆರ್ ಮಿಟ್ಯಾನಾಯ್ಕ್, ಬಿ ಆರ್ ಪಿ ಕೆ ಬಸವರಾಜ ನಿರ್ವಹಿಸಿದರು.ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.