ವಿದ್ಯಾರ್ಥಿಯ ಯಶಸ್ವಿ ಬದುಕಿಗೆ ಪಠ್ಯೇತರ ಚಟುವಟಿಕೆಗಳು ಪೂರಕ: ಡಾ. ಸತೀಶ ಕುಲಕರ್ಣಿ
Extracurricular activities are essential for a student's successful life: Dr. Satish Kulkarni
ಲೋಕದರ್ಶನ ವರದಿ
ಹಾವೇರಿ, 19: ವಿದ್ಯಾರ್ಥಿಗಳ ಓದು ಕೇವಲ ಪಠ್ಯಕ್ರಮಕ್ಕೆ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಿದಾಗ ಉಜ್ವಲ ಭವಿಷ್ಯ ನಿರ್ಮಾಣವಾಗುತ್ತದೆ ಎಂದು ಹಿರಿಯ ಸಾಹಿತಿ ಡಾ. ಸತೀಶ ಕುಲಕರ್ಣಿ ಅಭಿಪ್ರಾಯಪಟ್ಟರು.
ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಜಿ. ಎಚ್. ಮಹಾವಿದ್ಯಾಲಯದಲ್ಲಿ ಜರುಗಿದ 2025-26 ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಜೀವನದಲ್ಲಿ ಅನೇಕ ತಿರುವುಗಳು ಸಹಜವಾಗಿ ಬರುತ್ತವೆ. ವಿದ್ಯಾರ್ಥಿಗಳು ಅವುಗಳನ್ನು ಸವಾಲಾಗಿ ಸ್ವೀಕರಿಸಿ ಸಾಧನೆಯ ಮೆಟ್ಟಿಲುಗಳನ್ನು ಪರಿಶ್ರಮ, ಶ್ರದ್ಧೆ, ಕ್ರಿಯಾಶೀಲತೆಯ ಮೂಲಕ ಹತ್ತಬೇಕಾಗುತ್ತದೆ. ಕೇವಲ ಅಂಕಪಟ್ಟಿಗೆ ಅಂಟಿಕೊಳ್ಳದೇ ಉತ್ತಮ ಪ್ರಜೆಗಳಾಗಿ ನಿರ್ಮಾಣವಾಗುತ್ತ ಯುವಕರು ಚಿತ್ತ ಹರಿಸಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕೆ.ಎಲ್.ಇ. ಸಂಸ್ಥೆಯ ನಿರ್ದೇಶಕ ಎಂ. ಸಿ. ಕೊಳ್ಳಿ ಮಾತನಾಡಿ ವಿದ್ಯಾರ್ಥಿಗಳ ಹಿತವನ್ನು ಕಾಯುವಲ್ಲಿ ಕೆ.ಎಲ್.ಇ. ಸಂಸ್ಥೆಯು ತನ್ನ ಬದ್ಧತೆಯನ್ನು ಯಾವತ್ತೂ ಪ್ರದರ್ಶಿಸಿದೆ. ಈ ಹಿನ್ನಲೆಯಲ್ಲಿ ಜಿ. ಎಚ್. ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ನಿಜಕ್ಕೂ ಅಭಿನಂದನೀಯ ಮತ್ತು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 