ಚಾರ್ಮಾಡಿ ಘಾಟ್ ನಲ್ಲಿ ವ್ಯಾಪಕ ಮಳೆ, ಉರುಳಿಬಿದ್ದ ಮರಗಳು, ಭೂ ಕುಸಿತ
ಮಂಗಳೂರು, ಆ 6 ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಚಾರ್ಮಾಡಿ ಘಾಟ್ ನಲ್ಲಿ ಮೂರು ಕಡೆ ಗುಡ್ಡ ಕುಸಿತ ಸಂಭವಿಸಿದೆ.
ಘಾಟ್ ನ ಏಳನೇ ತಿರುವಿನಲ್ಲಿ ರಸ್ತೆಗೆ ಬೃಹತ್ ಮರ ಉರುಳಿ ಬಿದ್ದು, ಸಂಚಾರಕ್ಕೆ ತೊಡಕಾಗಿದೆ. ಮರ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಚಾರ್ಮಾಡಿಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸಮೀಪ ಹಾಗೂ ಘಾಟಿಯ ಮಧ್ಯೆ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಇದಾರಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಗುಡ್ಡ ಕುಸಿತದ ಸ್ಥಳದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಚಾರ್ಮಾಡಿ ಘಾಟ್ ನ ಏಳನೇ ತಿರುವಿನಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದಾಗಿ ಎರಡು ಕಿ.ಮೀಟರ್ ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ.
ಸ್ಥಳೀಯರು, ವಾಹನ ಸವಾರರು ಸೇರಿಕೊಂಡು ರಸ್ತೆಗೆ ಬಿದ್ದ ಮರವನ್ನು ತೆರವು ಕಾರ್ಯ ನಡೆಸಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 