ಖಾಲಿ ಹುದ್ದೆ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ: ಬಿ.ಸಿ.ಪಾಟೀಲ್
ಬೆಂಗಳೂರು, ಮಾ 9,ಕೃಷಿ ಇಲಾಖೆಯ ಗ್ರೂಪ್ ಸಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಹಾಗೂ ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಧಾನಸಭೆಗಿಂದು ತಿಳಿಸಿದ್ದಾರೆ.
ಸೋಮವಾರ ಜೆಡಿಎಸ್ ನ ಸದಸ್ಯ ಎಚ್.ಡಿ.ರೇವಣ್ಣ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಮೂಲಕ ಉತ್ತರಿಸಿರುವ ಸಚಿವರು, ಖಾಲಿ ಇರುವ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸರ್ಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. 2018-19 ನೇ ಸಾಲಿನಲ್ಲಿ ಗ್ರೂಪ್-ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು. ನೇರ ನೇಮಕಾತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು. ಕೃಷಿ ಇಲಾಖೆಯಲ್ಲಿ 3640 ಹುದ್ದೆಗಳು ಖಾಲಿಯಿದ್ದು, ಯ 2018-19 ನೇ ಸಾಲಿನಲ್ಲಿ ಗ್ರೂಪ್ ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 