ಮಠಾಧೀಶರುಗಳ ವಿರುದ್ಧ ಎಫ್‌ಐಆರ್ ಖಂಡನೀಯ: ಅತನೂರ
FIR against Mutt Chiefs is condemnable: Atanura
ಮಠಾಧೀಶರುಗಳ ವಿರುದ್ಧ ಎಫ್‌ಐಆರ್ ಖಂಡನೀಯ: ಅತನೂರ
ಸಿಂದಗಿ 06: ತುಮಕೂರು ಹೇಮಾವತಿ ಎಕ್ಸ್ ಪ್ರೆಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸುವಂತೆ ರೈತರಿಗೆ ಬೆಂಬಲ ನೀಡಿದ್ದ ಮಠಾಧೀಶರುಗಳ ವಿರುದ್ಧ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿರುವುದು ಖಂಡನೀಯ ಒಂದು ವೇಳೆ ಮಠಾಧೀಶರ ಮೇಲೆ ಹಾಕಿರುವ ಪ್ರಕರಣಗಳು ಹಿಂಪಡೆಯದಿದ್ದರೇ ರಾಜ್ಯಾದ್ಯಂತ ಹೋರಾಟ ಮಾಡಲು ಕರೆಕೊಡಲಾಗುವದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಯುವ ಘಟಕದ ರಾಜ್ಯಾಧ್ಯಕ್ಷ ನಿಂಗರಾಜ ಅತನೂರ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಮಠಾಧೀಶರಿಂದ ತುಮಕೂರು ಜಿಲ್ಲೆ ಇಡೀ ದೇಶಕ್ಕೆ ಮಾದರಿಯಾದ ಜಿಲ್ಲೆ. ತ್ರಿವೀದ ದಾಸೋಹ ಅನ್ನ, ವಸತಿ, ಶಿಕ್ಷಣ ದಾನ ಮಾಡಿ ಸಮಾಜ ಕಾಪಾಡುವ ಕಾಯಕದಲ್ಲಿ ನಿರತರಾಗಿರುವ ಮಠಾಧೀಶರುಗಳ ಮೇಲೆ ಕೊಲೆ ಯತ್ನದ ಪ್ರಕರಣವನ್ನು ದಾಖಲೆ ಮಾಡಿರುವದು ಶೋಚನೀಯ ಸಂಗತಿ. ಜಿಲ್ಲೆಯ ಹಿತಕ್ಕಾಗಿ ಐತಿಹಾಸಿಕ ನೀರಾವರಿ ಹೋರಾಟದಲ್ಲಿ ಭಾಗವಹಿಸಿದ್ದ ಮಠಾಧೀಶರನ್ನು ಹಿಮ್ಮೆಟ್ಟಿಸುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಸರ್ಕಾರದ ನಡೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 