ವಿಜಯಪುರ

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಸ್ಥಾನಗಳನ್ನು ಪಡೆಯಿರಿ: ಉಪ್ಪಾರ

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಸ್ಥಾನಗಳನ್ನು ಪಡೆಯಿರಿ: ಉಪ್ಪಾರ

ಲೋಕದರ್ಶನ ವರದಿ 

        ವಿಜಯಪುರ 27: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸಮಯ ಸದ್ಬಳಕೆ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಸ್ಥಾನಗಳನ್ನು ಪಡೆಯಬೇಕೆಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಪನಿರ್ದೇಶಕ ಕೆ. ಎ. ಉಪ್ಪಾರ ಅವರು ಕರೆ ನೀಡಿದರು.

          ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ದಿನಾಂಕ 25ರಂದು ವಿದ್ಯಾವರ್ಧಕ ಸಂಘದ ವಿ. ಭ. ದರಬಾರ ಪದವಿ-ಪೂರ್ವ ಕಾಲೇಜಿನ 2025-26ನೇ ಸಾಲಿನ ಶೈಕ್ಷಣಿಕ ಪಾರಿತೋಷಕ ವಿತರಣಾ ಸಮಾರಂಭ ಮುಖ್ಯ ಅತಿಥಿಗಳಾಗಿ ಸನ್ಮಾನ ಸ್ವೀಕರಿಸಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. 

ಅಧ್ಯಕ್ಷತೆ ವಹಿಸಿದ್ದ ಖ್ಯಾತ ನ್ಯಾಯವಾದಿಗಳು, ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿಗಳು ಹಾಗೂ ಖಜಾಂಚಿ ಪ್ರಕಾಶ ಎಸ್‌. ಉಡುಪೀಕರ ಇವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಮಾತನಾಡಿ ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ಶ್ರದ್ಧಾಸಕ್ತಿಗಳಿಂದ ಅಭ್ಯಾಸ ಮಾಡಿ ಗುರಿ ಸಾಧನೆಯತ್ತ ಗಮನ ಕೇಂದ್ರೀಕರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. 

ವಿದ್ಯಾವರ್ಧಕ ಸಂಘದ ಸಮನ್ವಯಾಧಿಕಾರಿ ಡಾ. ವಿ.ಬಿ. ಗ್ರಾಮಪುರೋಹಿತ ಇವರು ವಿದ್ಯಾರ್ಥಿಗಳ ಸಾಧನೆಗೆ ಮಾರ್ಗದರ್ಶನ ನೀಡಿದ ಉಪನ್ಯಾಸಕರನ್ನು ಗೌರವಿಸಿ ಮಾತನಾಡಿದರು. ವಿದಾರ್ಥಿ ಪ್ರತಿನಿಧಿ ಕುಮಾರ ಆಂಜನೇಯ ಸಂಗೋಗಿ ಉಪಸ್ಥಿತರಿದ್ದರು. ಉಪನ್ಯಾಸಕ ಎಂ.ಎಸ್‌. ಬಿರಾದಾರ, ಎ. ನಾಗರಾಜ, ಸಿ.ಎಸ್‌.ಸಜ್ಜನರ ಅತಿಥಿ ಗಣ್ಯರನ್ನು ಪರಿಚಯಿಸಿದರು.

        ಉಪನ್ಯಾಸಕಿಯರಾದ ಆರ್‌. ಎಸ್‌. ಕ್ಷೀರಸಾಗರ ಹಾಗೂ ಎಸ್‌. ಎಲ್‌. ಹಳ್ಳದಮನಿಯವರು ಪ್ರತಿಭಾವಂತ ವಿದ್ಯಾರ್ಥಿಗಳ ವಿವರ ನೀಡಿದರು. ಪ್ರಾಚಾರ್ಯ ಟಿ.ಆರ್‌. ಕುಲಕರ್ಣಿ ಸ್ವಾಗತಿಸಿದರು. ವಿದಾರ್ಥಿನಿಯರು ಪ್ರಾರ್ಥನೆ ನಡೆಸಿಕೊಟ್ಟರು. ಜಿ.ಬಿ ಕುಲಕರ್ಣಿ ವಂದಿಸಿದರು. ಬಿ.ಬಿ. ಪಾಟೀಲ್ ನಿರೂಪಿಸಿದರು. ಪಾಲಕರು, ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು. ವಿಶ್ರಾಂತ ಪ್ರಾಚಾರ್ಯರು, ನಿವೃತ್ತ ಉಪನ್ಯಾಸಕರು ಉಪಸ್ಥಿತರಿದ್ದರು. 


ಸುದ್ದಿ ಓದಿ