ಕಬ್ಬಿನ ಬಾಕಿ ಬಿಲ್ ಪಾವತಿಗೆ ಕಾರ್ಖಾನೆಗಳ ಒಪ್ಪಿಗೆ: ಧರಣಿ ಹಿಂದಕ್ಕೆ
Factories agree to pay sugarcane dues: Protest called off
ಲೋಕದರ್ಶನ ವರದಿ
ಜಮಖಂಡಿ 02: ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಧರಣಿ ಸತ್ಯಾಗ್ರಹವನ್ನು ಹಿಂದಕ್ಕೆ ಪಡೆಯಲಾಗಿದೆ.. ಏ,10 ರ ವರೆಗೆ ಎಲ್ಲ ಸಕ್ಕರೆ ಕಾರ್ಖಾನೆಗಳು ಬಿಲ್ಲ ಪಾವತಿಸಲು ಒಪ್ಪಿಗೆ ನೀಡಿದ್ದು ಧರಣಿ ಹಿಂದಕ್ಕೆ ಪಡೆಯಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ತಾಲುಡಾಳಿತ ಸೌಧದ ಮುಂದೆ ಡಿವೈಎಸ್‌ಪಿ ಸೈಯದ್ ರೋಷನ್ ಜಮೀರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಸಿಪಿಐ ಮಲ್ಲಪ್ಪ ಮಡ್ಡಿ, ತಹಸೀಲ್ದಾರ ಅನೀಲ ಬಡಿಗೇರ ಹಾಗೂ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆದು ಧರಣಿ ಸತ್ಯಾಗ್ರಹವನ್ನು ಹಿಂದಕ್ಕೆ ಪಡೆಯಲು ತೀರ್ಮಾನಿಸಲಾಗಿದೆ ಎಂದರು.
ತಾಲೂಕಿನ 2 ಸಕ್ಕರೆ ಕಾರ್ಖಾನೆಗಳು ಸುಮಾರು 400 ಕೋಟಿ ರೂಪಾಯಿ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿವೆ. ಇದರಿಂದ ರೈತರು ಅನಿವಾರ್ಯವಾಗಿ ಹೋರಾಟಕ್ಕೆ ಮುಂದಾಗ ಬೇಕಾಗಿತ್ತು. ಇವತ್ತು ನಡೆದ ಸಭೆಯಲ್ಲಿ 10ನೇ ತಾರೀಖೀನ ಒಳಗಾಗಿ ರೈತರ ಬಾಕಿ ಹಣವನ್ನು ಬಿಡುಗಡೆ ಗೊಳಿಸಲು ಕಾರ್ಖಾನೆಗಳು ಒಪ್ಪಿಗೆ ಸೂಚಿಸಿರುವದರಿಂದ ಧರಣಿ ಹಿಂದಕ್ಕೆ ಪಡೆಯಲಾಗಿದೆ. ಕಾರ್ಖಾನೆಗಳ ಮಾಲಿಕರು ಕೊಟ್ಟ ಮಾತಿಗೆ ತಪ್ಪಿದ್ದಲ್ಲಿ ಎ, 10 ರಿಂದ ಪುನಹ ಧರಣಿ ಪ್ರಾರಂಭಿಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮುತ್ತಪ್ಪ ಕೋಮರ, ಶ್ರೀಶೈಲ ಬುಮಾರ,ರಾಜು ನದಾಫ, ಪ್ರಸನ್ನ ಜಮಖಂಡಿ, ಬಾಹುಬಲಿ ನ್ಯಾಮಗೌಡ, ಸಿದ್ದಪ್ಪ ಬಣಜಿಗ ,ಕಲ್ಲಪ್ಪ ಬಿರಾದಾರ, ಪ್ರಶಾಂತ ಖರೆ, ಮಹದೇವ ಉಪ್ಪಾಲದಿನ್ನಿ, ಕುಮಾರ ಬೀಳುರ, ಮಲ್ಲಿಕಾರ್ಜುನ ಬೆಕ್ಕೇರಿ ಸೇರಿದಂತೆ ಅನೇಕ ರೈತರು ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 