ಕಂಪ್ಲಿ

ರೈತರಿಗೆ ಸಮರ​‍್ಕ ನೀರು ನೀಡಲು ವಿಫಲ: ಸುರೇಶ್ ಬಾಬು

ರೈತರಿಗೆ ಸಮರ​‍್ಕ ನೀರು ನೀಡಲು ವಿಫಲ: ಸುರೇಶ್ ಬಾಬು

ಲೋಕದರ್ಶನ ವರದಿ 

ಕಂಪ್ಲಿ, 18: ತುಂಗಭದ್ರಾ ಜಲಾಶಯದಿಂದ ಎಲ್‌ಎಲ್‌ಸಿ ಹಾಗೂ ಎಚ್‌ಎಲ್‌ಸಿ ಕಾಲುವೆ ವ್ಯಾಪ್ತಿಯ ರೈತರಿಗೆ ಸಮರ​‍್ಕವಾಗಿ ನೀರು ಹರಿಸದೆ ಸರ್ಕಾರ ಹಾಗೂ ಸ್ಥಳೀಯ ಶಾಸಕರು ರೈತರನ್ನು ಸಂಕಷ್ಟಕ್ಕೆ ದೂಡಿದ್ದಾರೆ ಎಂದು ಮಾಜಿ ಶಾಸಕ ಟಿ.ಎಚ್‌. ಸುರೇಶ್ ಬಾಬು ಆರೋಪಿಸಿದರು.  

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ನಡೆದ ರೈತರ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಜಲಾಶಯದಲ್ಲಿ ಪ್ರಸ್ತುತ ಸುಮಾರು 93 ಟಿಎಂಸಿ ನೀರು ಸಂಗ್ರಹವಿದ್ದರೂ ರೈತರ ಜಮೀನುಗಳಿಗೆ ಸಮರ​‍್ಕ ನೀರು ತಲುಪುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  

ಕರ್ನಾಟಕ ಕೋಟಾದಡಿ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದ್ದರೂ ವಿತರಣಾ ವ್ಯವಸ್ಥೆಯಲ್ಲಿನ ಸಮಸ್ಯೆಯಿಂದ ಕೆಳಭಾಗದ ರೈತರಿಗೆ ನೀರು ಸಿಗುತ್ತಿಲ್ಲ. ಕೂಡಲೇ ಎರಡೂ ರಾಜ್ಯಗಳ ಸಮನ್ವಯದೊಂದಿಗೆ ನೀರು ಹರಿಸಿ ರೈತರ ಜಮೀನುಗಳಿಗೆ ತಲುಪಿಸಬೇಕು. ಇಲ್ಲದಿದ್ದರೆ ರೈತರ ಹೋರಾಟ ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.  

ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ. ಮಹಾದೇವ ಮಾತನಾಡಿ, ಇತ್ತೀಚಿನ ಎಲ್‌ಸಿ ಸಭೆಯಲ್ಲಿ ಕರ್ನಾಟಕ ಕೋಟಾದಡಿ ನೀರು ಹರಿಸಲು ನಿರ್ಧಾರ ಕೈಗೊಂಡಿದ್ದರೂ ಕೆಳಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ ಮುಂದುವರಿಯಲಿದೆ ಎಂದರು.  ಪ್ರತಿಭಟನೆಯಲ್ಲಿ ವಿವಿಧ ಗ್ರಾಮಗಳ ರೈತ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು. 


ಸುದ್ದಿ ಓದಿ