ಬಳ್ಳಾರಿ

ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ 71ನೇ ಸಂಸ್ಥಾಪನಾ ದಿನಾಚರಣೆ

ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ 71ನೇ ಸಂಸ್ಥಾಪನಾ ದಿನಾಚರಣೆ

ಬಳ್ಳಾರಿ, ಜು. 23: ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಶಾಖೆಯ 71ನೇ ಸಂಸ್ಥಾಪನಾ ದಿನಾಚರಣೆಯನ್ನು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹತ್ತಿರವಿರುವ (ಕೇಂದ್ರ ಬಸ್ ನಿಲ್ದಾಣ) ಸಂಸ್ಥೆಯ ಕಚೇರಿ ಆವರಣದಲ್ಲಿ ಗುರುವಾರ ಆಚರಿಸಲಾಯಿತು. 

  ಸಂಸ್ಥೆಯ ಅಧ್ಯಕ್ಷರಾದ ಎಸ್.ವಿಜಯಸಿಂಹ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಸ್ಥೆಯು ಕಳೆದ ಮೂರು ನಾಲ್ಕು ದಶಕಗಳಿಂದ ಜಿಲ್ಲೆಯಲ್ಲಿ ಗಣನೀಯ ಸೇವೆಯನ್ನು ಸಲ್ಲಿಸುತ್ತಿದೆ ಎಂದು ಹೇಳಿದರು. ನಂತರ ಸಂಸ್ಥೆ ನಡೆದು ಬಂದ ದಾರಿಯನ್ನು ವಿವರಿಸಿದರು.   

   ಈ ಸಂದರ್ಭದಲ್ಲಿ ಶಾಖೆಯಲ್ಲಿ ಕಳೆದ ಮೂರು ವರ್ಷಗಳಿಂದ ಕುಟುಂಬ ಯೋಜನಾ ಶಸ್ತ್ರಚಿಕಿತ್ಸೆಯನ್ನು ಮಾಡುತ್ತಿರುವ ಸಂಡೂರಿನ ಹಿರಿಯ ವೈದ್ಯಾಧಿಕಾರಿಗಳಾದ ಡಾ.ವೆಂಕಟೇಶಾಚಾರ್ ಅವರನ್ನು ಸನ್ಮಾನಿಸಲಾಯಿತು. 2017 ರಿಂದ ಇಲ್ಲಿಯವರೆಗೆ ಸುಮಾರು 2951 ಕುಟುಂಬ ಯೋಜನೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

    ಸಂಸ್ಥೆಯ ಶಾಖಾ ವ್ಯವಸ್ಥಾಪಕರಾದ ಎಸ್.ವಿಜಯಲಕ್ಷ್ಮೀ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅನಿಲ್ಕುಮಾರ್ ಶಾಖಾಪುರ, ಗೋಪಾಲ್ ವಮರ್ಾ, ಚಂದ್ರಕಲಾ ದೇಶಪಾಂಡೆ, ಸುಶೀಲಾ ನಾಯಕ ಸೇರಿದಂತೆ  ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಇದ್ದರು.


ಸುದ್ದಿ ಓದಿ