ನೆಚ್ಚಿನ ನಟನ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಮೂಡಿಬಂದಿಲ್ಲ ಎಂದು ಅಭಿಮಾನಿ ನೇಣಿಗೆ ಶರಣು
ಕರ್ನೂಲ್ : ಮಾರ್ಚ್ 13 : ಕರ್ನೂಲಿನ ತಿಲಕನಗರದಲ್ಲಿ ದುರಂತ ಘಟನೆ ಸಂಭವಿಸಿದೆ. ತನ್ನ ನೆಚ್ಚಿನ ನಾಯಕನ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಮೂಡಿಬಂದಿಲ್ಲ ಎಂದು ಮನನೊಂದ ರವಿತೇಜ (24) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಿಂದ ಪೋಷಕರು, ಕುಟುಂಬಸ್ಥರು, ಬಂಧು ಮಿತ್ರರು ಕಣ್ಣೀರಿಡುತ್ತಿದ್ದಾರೆ.
ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಲೇಟೆಸ್ಟ್ ಸಿನಿಮಾ ರಾಧೇಶ್ಯಾಮ್ ಇತ್ತೀಚೆಗಷ್ಟೇ ತೆರೆಕಂಡಿದೆ. ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾದ ಈ ಚಿತ್ರವನ್ನು ಯುವಿ ಕ್ರಿಯೇಷನ್ಸ್ ಬೃಹತ್ ಬಜೆಟ್ನಲ್ಲಿ ನಿರ್ಮಿಸಿದೆ. ಮಾರ್ಚ್ 11 ರಂದು ಬಿಡುಗಡೆಯಾದ ಚಿತ್ರ ಡಿವೈಡ್ ಟಾಕ್ ಪಡೆದುಕೊಂಡಿದೆ. ಇದರಿಂದ ಮನನೊಂದ ಪ್ರಭಾಸ್ ಅಭಿಮಾನಿ ರವಿತೇಜ.
ಸಿನಿಮಾ ಚೆನ್ನಾಗಿಲ್ಲ ಎಂದು ಬೇಸರಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಯಿಗೆ ಹೇಳಿಯೇ ರವಿತೇಜ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಾರ್ಹ. ಈ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.