ಮನರಂಜನೆ

‘ಪುಷ್ಪ’ ಫಸ್ಟ್ ಲುಕ್ ಗೆ ಫ್ಯಾನ್ಸ್ ಫಿದಾ

‘ಪುಷ್ಪ’ ಫಸ್ಟ್ ಲುಕ್ ಗೆ ಫ್ಯಾನ್ಸ್ ಫಿದಾ

ಬೆಂಗಳೂರು/ಹೈದರಾಬಾದ್, ಸೆ. 29  ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ, ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ವೀಕ್ಷಕರ ಗಮನ ಸೆಳೆದಿದೆ.
 
ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರವೇನು ಎಂಬ ಅಭಿಮಾನಿಗಳ ಕುತೂಹಲಕ್ಕೂ ಉತ್ತರ ಸಿಕ್ಕಿದ್ದು, ಚಿತ್ತೂರು ಭಾಗದ ಶ್ರೀವಲ್ಲಿ ಹೆಸರಿನ ಯುವತಿಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅಲ್ಲು ಅರ್ಜುನ್ ರಕ್ತಚಂದನ ಕಳ್ಳಸಾಗಣೆ ಮಾಡುವ ಲಾರಿ ಚಾಲಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
 
ತೆಲುಗಿನ ಸುಕುಮಾರ್ ನಿರ್ದೇಶಿಸಿರುವ  ಚಿತ್ರದ ಮೊದಲ ಭಾಗ ‘ಪುಷ್ಪ ದಿ ರೈಸ್’ ಡಿಸೆಂಬರ್ 25ರಂದು ತೆರೆಗೆ ಬರಲಿದೆ.  2022ರಲ್ಲಿ ಮತ್ತೊಂದು ಭಾಗ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.
 
ಇದುವರೆಗೂ ಮಾಡರ್ನ್ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ ಈ ಚಿತ್ರದಲ್ಲಿ ಪಕ್ಕಾ ಹಳ್ಳಿ ಹೆಣ್ಣಿನ ಲುಕ್ ನಲ್ಲಿದ್ದಾರೆ. ಏಕಕಾಲಕ್ಕೆ 5 ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.
 
ತಾರಾಗಣದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಜತೆಗೆ ಜಗಪತಿ ಬಾಬು, ಪ್ರಕಾಶ್ ರಾಜ್, ಸುನೀಲ್, ವೆನ್ನೆಲ್ಲಾ ಕಿಶೋರ್ ಮೊದಲಾದವರಿದ್ದಾರೆ.

ಸುದ್ದಿ ಓದಿ