ಸಿಪಿಐ ಹಾಗೂ ಪಿಎಸ್ ಐ ಗಳಿಗೆ ಬೀಳ್ಕೊಡುಗೆ- ನೂತನ ಅಧಿಕಾರಿಗಳಿಗೆ ಸ್ವಾಗತ ಕಾರ್ಯಕ್ರಮ
ಕುಷ್ಟಗಿ.ಅ.07; ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ಹಾಗೂ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅ.8 ಮಂಗಳವಾರ ಸಂಜೆ ಇಲ್ಲಿನ ಬುತ್ತಿ ಬಸವೇಶ್ವರ ದೇವಸ್ಥಾನದ ಸಭಾ ಮಂಟಪದಲ್ಲಿ ಕುಷ್ಟಗಿ ಆರಕ್ಷಕ ಠಾಣೆಯಿಂದ ಇತ್ತೀಚಿಗೆ ವರ್ಗಾವಣೆಗೊಂಡ ಸಿ.ಪಿ.ಐ ನಿಂಗಪ್ಪ ರುದ್ರಪ್ಪಗೋಳ ಹಾಗೂ ಗಂಗಾವತಿ ವೃತ್ತದ ಡಿ.ವಾಯ್.ಎಸ್.ಪಿ ರುದ್ರೇಶ ಉಜ್ಜನಕೊಪ್ಪ ಇವರನ್ನು ಬೀಳ್ಕೊಡುವ ಮತ್ತು ಇತ್ತೀಚಿಗೆ ನೂತನವಾಗಿ ಅಧಿಕಾರ ಸ್ವೀಕರಿಸಿದ ಸಿ.ಪಿ.ಐ ಯಶವಂತ ಬಿಸನಾಳ ಹಾಗೂ ಪಿ.ಎಸ್.ಐಯಾಗಿ ಮುದ್ದುರಂಗಸ್ವಾಮಿ ಅವರಿಗೆ ಆತ್ಮೀಯವಾಗಿ ಸ್ವಾಗತಿಸಿಕೊಳ್ಳುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಕಾರಣ ಕುಷ್ಟಗಿ ಪಟ್ಟಣ ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಹಾಗೂ ಹಿರಿಯ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.