ಸರಕಾರಿ ಸಹಾಯಕ ಅಭಿಯೋಜಕರಿಗೆ ಬೀಳ್ಕೊಡುಗೆ
Farewell to Government Assistant Public Prosecutor
ಲೋಕದರ್ಶನ ವರದಿ
ಸರಕಾರಿ ಸಹಾಯಕ ಅಭಿಯೋಜಕರಿಗೆ ಬೀಳ್ಕೊಡುಗೆ
ಯರಗಟ್ಟಿ, 11:ಪಟ್ಟಣದ ವಕೀಲರ ಸಂಘದ ವತಿಯಿಂದ ವರ್ಗಾವಣೆಯಾಗಿರುವ ಸರ್ಕಾರಿ ಸಹಾಯಕ ಅಭಿಯೋಜಕ ಸಚಿನ್ ಅಂಗಡಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ನೂತನ ಸರ್ಕಾರಿ ಸಹಾಯಕ ಅಭಿಯೋಜಕರಾಗಿ ಆಗಮಿಸಿದ ಶೀಲ್ಪಾ ಜೋಶಿ ಅವರನ್ನು ಸ್ವಾಗತಿಸಲಾಯಿತು.
ನ್ಯಾಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿನ್ ಅಂಗಡಿ, ಸರ್ಕಾರಿ ನೌಕರರಿಗೆ ವರ್ಗಾವಣೆ ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಯಾವುದೇ ಸ್ಥಳದಲ್ಲಿದ್ದರೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಬೇಕು ಎಂದು ಹೇಳಿದರು. ಪ್ರತಿಯೊಬ್ಬರೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಹೆಸರು ಗಳಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಐ.ಬಿ. ಗೌಡ, ಉಪಾಧ್ಯಕ್ಷ ವೈ.ಬಿ. ನರಿ, ಕಾರ್ಯದರ್ಶಿ ದೀಲೀಪ್ ಜಮಾದಾರ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಹಲವು ವಕೀಲರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 