ರೈತ , ದಿನಗೂಲಿಗಳಿಗೆ ವಿಶೇಷ ಪ್ಯಾಕೇಜ್ ಇಲ್ಲದಿರುವುದು ನಿರಾಸೆ: ಸಿದ್ದು
ಬೆಂಗಳೂರು,ಎ 14,ಕರೋನ ಸಂಕಷ್ಟ ನಿವಾರಣೆಗಾಗಿ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಸಂಕಷ್ಟದಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡದಿರುದು ನಿರಾಸೆ ತಂದಿದೆ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ. 3 ರವರೆಗೆ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಿರುವುದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ 2 ನೇ ಬಾರಿಗೆ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಿತ್ತು ಎಂದು ಅವರು ಹೇಳಿದ್ದಾರೆ.ರೈತರು, ದಿನ ನಿತ್ಯ ಕೂಲಿ ಮಾಡುವವರಿಗಾಗಿ ಮೋದಿ ತಮ್ಮ ಭಾಷಣದಲ್ಲಿ ಏನನ್ನು ಘೋಷಣೆ, ಪ್ರಸ್ತಾಪ ಮಾಡಿಲ್ಲ. ಲಾಕ್ ಡೌನ್ ಘೋಷಣೆ ಮಾಡಿ ಎಲ್ಲ ವಹಿವಾಟು ಸ್ಥಗಿತಗೊಳಿಸಿದ ಮೇಲೆ ಸಾಲ ತೀರಿಸಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ . ಲಾಕ್ ಡೌನ್ ಅವಧಿ ಮುಗಿದ ಮೇಲೆ ಬಡ್ಡಿ ಸಮೇತ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕೃಷಿ ಸಾಲವನ್ನೇ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 