ಕಾರವಾರ

ವಿಷ ಸೇವಿಸಿ ರೈತ ಆತ್ಮಹತ್ಯೆ

ವಿಷ ಸೇವಿಸಿ ರೈತ ಆತ್ಮಹತ್ಯೆ

ಮುಂಡಗೋಡ 04: ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. 

ಗಂಗಾರಾಮ ಶಂಕರಸಿಂಗ್ ರಜಪೂತ್(55) ಸಾವಿಗೆ ಶರಣಾದ ರೈತ. ಬ್ಯಾಂಕ್ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾಲ ಮಾಡಿ ಬೆಳೆದ ಬೆಳೆ ಹಾನಿಯಾಗಿದ್ದು, ಸಾಲ ತೀರಿಸಲಾಗದೆ ಇದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಗದ್ದೆಯಲ್ಲಿದ್ದ ಕ್ರೀಮಿನಾಷಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಮುಂಡಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಸುದ್ದಿ ಓದಿ