ರಾಷ್ಟ್ರೀಯ ಹೆದ್ದಾರಿ ಬಂದ್ಗೆ ರೈತರ ನಿರ್ಧಾರ
ಇಂಡಿ, ಸೆ.18: ತಾಲೂಕಿನಲ್ಲಿ ತೀವ್ರ ಮಳೆ ಕೊರತೆ ಹಾಗೂ ಭೀಕರ ಕೃಷಿ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಇಂಡಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.22ರಂದು ಪಿದಿಳ್ತಹ್ಝ್ತಿಹ್ಖ್ದ್ಘೃ ರಾಷ್ಟ್ರೀಯ ಹೆದ್ದಾರಿ ಜೋಡಗುಡಿ (ತಡವಲಗಾ) ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರುನಾಥ ಬಗಲಿ ತಿಳಿಸಿದರು. ಇಂಡಿ ನಗರದ ಶಾಂತೇಶ್ವರ ಮಂಗಲ ಕಾರ್ಯಾಲಯದ ಆವರಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ರೈತರು ಹಾಗೂ ಸಾರ್ವಜನಿಕರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.