ಸಂಪರ್ಕ ರಸ್ತೆ ನಿಮರ್ಾಣಕ್ಕೆ ರೈತರ ಆಗ್ರಹ
ಲೋಕದರ್ಶನ ವರದಿ
ಬ್ಯಾಡಗಿ 03: ತಾಲೂಕಿನ ಮೋಟೆಬೆನ್ನೂರ ಗ್ರಾಮದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗೆ ಸಂಬಂಧಿಸಿದಂತೆ ಮೇಲ್ಸೇತುವೆಯನ್ನು ನಿಮರ್ಿಸಲಾಗುತ್ತಿದ್ದು, ರೈತರಿಗೆ ತಮ್ಮ ಜಮೀನುಗಳಿಗೆ ತೆರಳಲು ಸಂಪರ್ಕ ರಸ್ತೆ ಇಲ್ಲದೇ ಇರುವುದರಿಂದ ಪರದಾಡುವಂತಾಗಿದೆ ಎಂದು ಜಿಲ್ಲಾ ರೈತ ಸಂಘದ ಕಾರ್ಯದಶರ್ಿ ಮಲ್ಲಿಕಾಜರ್ುನ ಬಳ್ಳಾರಿ ಆರೋಪಿಸಿದ್ದಾರೆ.
ಈ ಕುರಿತು ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಗ್ರಾಮದಲ್ಲಿ ನಡೆದಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ಆಮೆಗತಿಯಲ್ಲಿ ಸಾಗಿದ್ದು, ರೈತರಿಗೆ ತಮ್ಮ ಜಮೀನುಗಳಿಗೆ ಹೋಗಲು ಇದ್ದ ಸಂಪರ್ಕ ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ ರೈತರು ಹಾಗೂ ಪಾದಚಾರಿಗಳೂ ಸಹ ತೊಂದರೆಯಾಗಿದೆ. ಈ ಬಗ್ಗೆ ಸಂಬಂಧಿಸಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಸಂಪರ್ಕ ರಸ್ತೆಯ ನಿಮರ್ಾಣಕ್ಕೆ ಕ್ರಮ ವಹಿಸುವಂತೆ ಒತ್ತಾಯಿಸಿದರು.
7ರಂದು ಹೆದ್ದಾರಿ ತಡೆ..!!
ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಗುಡುಗೂರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಯು ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ, ಸಂಪರ್ಕ ರಸ್ತೆಯೂ ಇಲ್ಲದೇ ರೈತರು, ಸಾರ್ವಜನಿಕರು ಪರದಾಡುತ್ತಿದ್ದಾರೆ. ಈ ಬಗ್ಗೆ ಕೂಡಲೇ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕ್ರಮ ವಹಿಸಿ ಸಂಪರ್ಕ ರಸ್ತೆಯ ನಿಮರ್ಾಣಕ್ಕೆ ಮುಂದಾಗಬೇಕು. ಇಲ್ಲದೇ ಹೋದರೆ ಡಿಸೆಂಬರ್ 7 ರಂದು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ತಾಲೂಕಾ ಆಡಳಿತವನ್ನು ಎಚ್ಚರಿಸಿದ್ದಾರೆ. ಈ ಸಂದರ್ಭದಲ್ಲಿ ಮೋಟೆಬೆನ್ನೂರ ಗ್ರಾಮ ಘಟಕದ ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು