ವಿಜಯಪುರ

ನೀರಿನ ಅಭಾವದಿಂದ ರೈತರ ಸಂಕಷ್ಟ: ಕಾಲುವೆಗಳಿಗೆ ನೀರು ಬಿಡುವಂತೆ ಮನವಿ

ನೀರಿನ ಅಭಾವದಿಂದ ರೈತರ ಸಂಕಷ್ಟ: ಕಾಲುವೆಗಳಿಗೆ ನೀರು ಬಿಡುವಂತೆ ಮನವಿ

ಕೊಲ್ಹಾರ 15 : ತಾಲ್ಲೂಕಿನ ರೈತರ ಜಮೀನುಗಳಿಗೆ ನೀರಾವರಿ ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮುಳವಾಡ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಎಲ್ಲಾ ಕಾಲುವೆಗಳಿಗೆ ಶೀಘ್ರವಾಗಿ ನೀರು ಹರಿಸಬೇಕು ಎಂದು  ತಹಶೀಲ್ದಾರ ಸಂತೋಷ ಮ್ಯಾಗೇರಿ ಅವರ ಮುಖಾಂತರ  ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರಿಗೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ರವಿ ಗೊಳಸಂಗಿ ನೇತೃತ್ವದಲ್ಲಿ ಅವರ ಕಾರ್ಯಕರ್ತರು ರೈತರು ಬುಧವಾರ ಮನವಿಯನ್ನು ಸಲ್ಲಿಸಿದರು ಪ್ರಸಕ್ತ ಮುಂಗಾರು ಮಳೆ ಕೊರತೆಯಿಂದ ತಾಲ್ಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ ಬೆಳೆಗಳು ನೀರಿನ ಅಭಾವದಿಂದ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನ-ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.

ಪ್ರಸ್ತುತ ಆಲಮಟ್ಟಿ ಜಲಾಶಯದಲ್ಲಿ ಸುಮಾರು 95 ಟಿಎಂಸಿ ನೀರು ಸಂಗ್ರಹವಿದ್ದು, ರೈತರ ಹಿತದೃಷ್ಟಿಯಿಂದ ಮುಳವಾಡ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಎಲ್ಲಾ ಕಾಲುವೆಗಳಿಗೆ ಕೂಡಲೇ ನೀರು ಹರಿಸಿ ರೈತರ ಬೆಳೆಗಳನ್ನು ಹಾಗೂ ಜಾನುವಾರುಗಳ ಮೇವಿನ ವ್ಯವಸ್ಥೆಯನ್ನು ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.ಸಮರ​‍್ಕ ನೀರು ಹರಿಸಿದರೆ ರೈತರಿಗೆ ಹಾಗೂ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಒಂದು ವೇಳೆ ಶೀಘ್ರವಾಗಿ ನೀರು ಹರಿಸದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ನೇತೃತ್ವದಲ್ಲಿ ರೈತರೊಂದಿಗೆ ಸೇರಿ ಕೊಲ್ಹಾರ ತಹಶೀಲ್ದಾರರ ಕಚೇರಿ ಎದುರು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದೆ ಸಂದರ್ಭದಲ್ಲಿ ಸಲೀಂ ಮಮದಾಪೂರ, ಅಶೋಕ ಗಣಿ, ಚೆನ್ನಪ್ಪ ವಾಲಿಕಾರ, ಸುರೇಶ ಸಾರವಾಡ, ಶ್ರೀಧರ ಬೆಳೆಗಾರ,ಧರೆಪ್ಪ ನ್ಯಾಮಗೊಂಡ, ಸೇರಿದಂತೆ ಕರವೇ ಕಾರ್ಯಕರ್ತರು ಹಾಗೂ ರೈತರು ಇದ್ದರು 


ಸುದ್ದಿ ಓದಿ